ಶನಿವಾರ, ಜನವರಿ 18, 2020
25 °C

ಯುವಜನರಿಗೆ ಉದ್ಯೋಗಾವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಗಳಿಸಲು ಯುವಜನರಿಗೆ ವಿಪುಲ ಅವಕಾಶವಿದ್ದು, ಪ್ರತಿಯೊಬ್ಬರು ಸದ್ಬಳಕೆ ಮಾಡಿಳ್ಳಬೇಕು. ಯಾರೂ ಸಹ ನಿರಾಸೆಗೊಳಗಾಗುವ ಅಗತ್ಯವಿಲ್ಲ ಎಂದು ಲ್ಯಾಡರ್ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾ ಧಿಕಾರಿ ಸಿ.ವಿ.ರಮಣನ್ ತಿಳಿಸಿದರು.ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಉದ್ಯೋಗಾ ಕಾಂಕ್ಷಿಗಳಿ ಗಾಗಿ ಗುರುವಾರ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, `ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಾವಕಾಶಗಳು ಅಪಾರವಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು~ ಎಂದರು.`ಯಾವುದೇ ರೀತಿಯ ಹಿಂಜರಿಕೆ ಮತ್ತು ಭೀತಿ ವ್ಯಕ್ತಪಡಿಸದೇ ಯುವಜನರು ಉದ್ಯೋಗಾವಕಾಶ ಪಡೆಯಲು ಮುಂದಾಗಬೇಕು. ಸೂಕ್ತ ಮಾರ್ಗದರ್ಶನ ಮತ್ತು ಆತ್ಮವಿಶ್ವಾಸ ವಿದ್ದಲ್ಲಿ, ಯಾವುದೇ ಕಾರ್ಯದಲ್ಲೂ ಯಶಸ್ಸು ಗಳಿಸಬ ಹುದು~ ಎಂದು ಅವರು ತಿಳಿಸಿದರು. ಶಾಲಾ ಶಿಕ್ಷಕ ಸತ್ಯನಾರಾಯಣ ಮತ್ತು ಫ್ಯೂಚರ್ ಲರ್ನಿಂಗ್ ಸಂಸ್ಥೆಯ ಪ್ರತಿನಿಧಿ ಮಧು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಜ.26ಕ್ಕೆ ಗಣರಾಜ್ಯೋತ್ಸವ

ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಗಣರಾಜ್ಯೋತ್ಸಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, `ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಆಚರಣೆ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಇಲಾಖೆಯವರಿಗೆ ಉಸ್ತುವಾರಿ ವಹಿಸಲಾಗಿದೆ. ಅಂತಿಮ ಹಂತದ ಸಿದ್ಧತೆ ಮಾಡಲಾಗುತ್ತಿದೆ~ ಎಂದರು.ಇಂದು ಕೆಡಿಪಿ ಸಭೆ

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 10ಕ್ಕೆ ಸಭೆ ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.ನಾಳೆ ಕೆಡಿಪಿ ಸಭೆ

ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗದ ಸದಸ್ಯೆ ಕೆ.ಕಮಲಾ ಕುಮಾರಿಯವರು ಶನಿವಾರ ಚಿಕ್ಕಬಳ್ಳಾ ಪುರಕ್ಕೆ ಭೇಟಿ ನೀಡಲಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಅವರು ಗಿರಿಜನ ಉಪಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)