ಗಂಗಾವತಿ: ಅಧಿಕಾರಿಗಳ ಬೇಜವಾಬ್ದಾರಿ, ಪ್ರಚಾರದ ಕೊರತೆ ಮತ್ತು ಯುವಜನರಲ್ಲಿರುವ ನಿರಾಸಕ್ತಿಯಿಂದಾಗಿ ಯುವಜನ ಮೇಳಗಳು ಕಳಾಹೀನವಾಗುತ್ತಿವೆ ಎಂದು ಶಾಸಕ ಪರಣ್ಣ ಮುನವಳ್ಳಿ ವಿಷಾದ ವ್ಯಕ್ತಪಡಿಸಿದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ತಾಲ್ಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವಜನ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಯುವಕರಲ್ಲಿ ಅದರಲ್ಲೂ ಗ್ರಾಮೀಣ ಕ್ರೀಡೆಗಳಿಗೆ ವೇದಿಕೆ ಕಲ್ಪಿಸಬಲ್ಲ ಇಂಥ ಮೇಳ ಯಶಸ್ವಿಯಾಗಬೇಕಾದರೆ ಮುಂದಿನ ದಿನದಲ್ಲಿ ಅಧಿಕಾರಿಗಳು ಹೆಚ್ಚು ಚುರುಕಿನಿಂದ ಕಾರ್ಯ ನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.

ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಸರ್ಕಾರದ ಗಮನ ಸೆಳೆದು ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಸಂಗಾಪುರ ಗ್ರಾಮದಲ್ಲಿ ಪ್ರೌಢಶಾಲೆ ಆರಂಭವಾಗಲಿದೆ ಎಂದರು.

ಆನೆಗೊಂದಿ ಕ್ಷೇತ್ರದ ಜಿ.ಪಂ. ಸದಸ್ಯೆ ವಿಜಯಲಕ್ಷ್ಮಿ ಮಾತನಾಡಿ, ‘ರಾಜ್ಯ, ವಲಯಮಟ್ಟದಲ್ಲಿ ಸಾಧನೆ ಮಾಡಿದ ತಂಡಗಳು ತಾಲ್ಲೂಕಿನಲ್ಲಿ ಸಾಕಷ್ಟಿವೆ. ಆದರೆ ಬಿಡುಗಡೆಯಾಗುವ ರೂ, 10-20 ಸಾವಿರ ಹಣ ವ್ಯರ್ಥಮಾಡಿ ಕಾಟಾಚಾರಕ್ಕೆ ಮೇಳ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.

ಪ್ರಾಸ್ತಾವಿಕ ಮಾತನಾಡಿದ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಯ್ಯ ಹಿರೇಮಠ ಅವರು, ‘ಮಾರ್ಚ್ ತಿಂಗಳ ್ಲಒಳಗಾಗಿ ಯುವಜನ ಮೇಳ ಮುಗಿಸಬೇಕೆಂಬ ಷರತ್ತಿದೆ. ಜೊತೆಗೆ ಆನೆಗೊಂದಿ ಉತ್ಸವಕ್ಕೆ ಗಮನ ಕೇಂದ್ರೀಕರಿಸಬೇಕಿದ್ದರಿಂದ ತರಾತುರಿಯಲ್ಲಿ ಮೇವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.