ಶುಕ್ರವಾರ, ಏಪ್ರಿಲ್ 23, 2021
23 °C

ಯುವತಿಯ ಜತೆ ಅಸಭ್ಯ ವರ್ತನೆ- ರಸ್ತೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸವರ್ಣೀಯ ಯುವತಿಯೊಬ್ಬಳ ಜತೆ ದಲಿತ ಸಮುದಾಯದ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದರಿಂದ ಕೋಪಗೊಂಡ ಯುವತಿಯ ಪೋಷಕರು ಮತ್ತು ಸಂಬಂಧಿಕರು ನಗರದ ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಶುಕ್ರವಾರ ರಾತ್ರಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ ಪರಿಣಾಮ ಸುತ್ತಮುತ್ತಲ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಯಿತು.ಯುವತಿಯ ಜತೆ ಅನುಚಿತವಾಗಿ ನಡೆದುಕೊಂಡ ಯುವಕನನ್ನು ಬಂಧಿಸುವಂತೆ ಪಟ್ಟು ಹಿಡಿದ ಪ್ರತಿಭಟನಾಕಾರರು ಅರ್ಧ ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ಮಾಡಿದರು. ಇದರಿಂದ ವಾಹನ ಸಂಚಾರಕ್ಕೆ ಸ್ಥಳಾವಕಾಶವಿಲ್ಲದೆ ವಾಹನ ಸವಾರರು ಪರದಾಡಿದರು.ಹಳೆ ಚಂದಾಪುರದ ಮಹೇಶ್ ಎಂಬಾತ ಅದೇ ಊರಿನ ಯುವತಿಯ ಜತೆ ಮಧ್ಯಾಹ್ನ ಅನುಚಿತವಾಗಿ ವರ್ತಿಸಿದ್ದ. ಈ ವಿಷಯವನ್ನು ಯುವತಿ ಪೋಷಕರಿಗೆ ತಿಳಿಸಿದ್ದಳು. ಇದರಿಂದ ಕೋಪಗೊಂಡ ಪೋಷಕರು ಮತ್ತು ಸಂಬಂಧಿಕರು ಸಂಜೆ ಮಹೇಶ್‌ನ ಮನೆಯ ಬಳಿ ಹೋಗಿ ಜಗಳವಾಡಿದರು. ಈ ವೇಳೆ ಮಹೇಶ್‌ನ ಪೋಷಕರು ಹಾಗೂ ಸಂಬಂಧಿಕರು ಯುವತಿಯ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಮಹೇಶ್ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೆಬ್ಬಗೋಡಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.