ಭಾನುವಾರ, ಏಪ್ರಿಲ್ 11, 2021
32 °C

ಯುವತಿ ಆತ್ಮಹತ್ಯೆ ಗ್ರಾಮಕ್ಕೆ ಡಿಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚನೆಯಾಗಿರುವ ಡಿಎಸ್‌ಪಿ ನೇತೃತ್ವದ ತಂಡ ಬುಧವಾರ ತಾಲ್ಲೂಕಿನ ಹ್ಯಾಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಡಿಎಸ್‌ಪಿ ಸುರೇಶ ಮಸೂತಿ ನೇತೃತ್ವದ ತಂಡವು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಹನುಮವ್ವ ಡೋಲಿಯ ಚಿಕ್ಕಪ್ಪ ಹಾಗೂ ಕೆಲ ಗ್ರಾಮಸ್ಥರನ್ನು ಮಾತನಾಡಿಸಿ, ಘಟನೆ ಕುರಿತಂತೆ ಮಾಹಿತಿ ಸಂಗ್ರಹಿಸಿತು.

ಯುವತಿ ಹೊಟ್ಟೆನೋವನ್ನು ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಷ್ಟೇ ಹೇಳಿದ ಗ್ರಾಮಸ್ಥರು ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.

ಹೊಲಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಾಗಿಯೂ ಕೆಲ ಗ್ರಾಮಸ್ಥರು ತಂಡಕ್ಕೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಹನುಮವ್ವ ಬಾಲಕಿ ಎಂದು ಹೇಳಲಾಗುತ್ತಿದೆ. ಆದರೆ, ಗಾಮೀಣ ಠಾಣೆಗೆ ನೀಡಿರುವ ದೂರಿನಲ್ಲಿ 19 ವರ್ಷ ಎಂಬುದಾಗಿ ಮಾಹಿತಿ ನೀಡಿರುವುದು ಸಹ ಸಂಶಯಕ್ಕೆ ಕಾರಣವಾಗಿದೆ.

`ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಹನುಮವ್ವ ಡೋಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ಗದಗಿನಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಲು ಕನಿಷ್ಠ 2 ತಿಂಗಳು ಬೇಕು ಎಂದು ಹೇಳಿದರು. `ಹನುಮವ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಾಗಿ ದೂರು ಸಲ್ಲಿಸಲಾಗಿದೆ.ಆದರೆ, ಅತ್ಯಾಚಾರ ನಡೆದು, ಅದರ ದೃಶ್ಯಾವಳಿಗಳು ಮೊಬೈಲ್‌ನಲ್ಲಿ ಹರಿದಾಡಿದ್ದರಿಂದ ಮನನೊಂದು ಹನುಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಬಗ್ಗೆ ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.