ಸೋಮವಾರ, ಮೇ 10, 2021
26 °C

ಯುವರಾಜ್- ಹರಭಜನ್ ಸಿಂಗ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಶನಿವಾರ  ಆಫ್‌ಸ್ಪಿನ್ನರ್ ಹರಭಜನ್ ಸಿಂಗ್ ಭೇಟಿಯಾಗಿದ್ದಾರೆ.`ಯುವಿಯನ್ನು ಭೇಟಿಯಾದೆ. ಅವರು ಸಾಕಷ್ಟು ಉತ್ಸಾಹದಿಂದ ಇದ್ದಾರೆ~ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹರಭಜನ್ ಸಾಮಾಜಿಕ ತಾಣ ಟ್ವಿಟರ್‌ನಲ್ಲಿ ಬರೆದಿದ್ದಾರೆ.ಕೆಲ ದಿನಗಳಿಂದ ಕ್ರಿಕೆಟಿಗರು ಹಾಗೂ ಅಧಿಕಾರಿಗಳು ಯುವಿಯನ್ನು ಭೇಟಿಯಾಗುತ್ತಿದ್ದಾರೆ. ಇಂಗ್ಲೆಂಡ್ ತಂಡದ ಕೆವಿನ್ ಪೀಟರ್ಸನ್, ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್, ಐಸಿಸಿ ಮುಖ್ಯಸ್ಥ ಶರದ್ ಪವಾರ್ ಸಹ ಇತ್ತೀಚಿಗೆ ಭೇಟಿಯಾಗಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.