ಬುಧವಾರ, ಏಪ್ರಿಲ್ 14, 2021
24 °C

ಯುವ ಕಾಂಗ್ರೆಸ್‌ಗೆ ನೇರ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ನೇರ ಚುನಾವಣೆ ನಡೆಸಲಿದ್ದು, ಜಿಲ್ಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಯುವಕರ ಸದಸ್ಯತ್ವ ನೋಂದಣಿ ಮಾಡಿಸಲು ಪಕ್ಷದ ಕಾರ್ಯಕರ್ತರು, ಮುಖಂಡರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಖರ್ಗೆ ಹೇಳಿದರು.ನೇರ ಚುನಾವಣೆ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಡುವ ಪ್ರಕ್ರಿಯೆಗೆ ಕರ್ನಾಟಕದಲ್ಲಿ ಈಗಾಗಲೇ ಚಾಲನೆ ದೊರೆತಿದೆ. ಬೂತ್ ಮಟ್ಟದಲ್ಲಿ ಪಕ್ಷದ ಯುವ ಕಾರ್ಯಕರ್ತರು, ಮುಖಂಡರು ಹೊಂದಿರುವ ಸಂಬಂಧ ಹೊಸ ಯುವ ಸದಸ್ಯತ್ವ ನೋಂದಣಿಗೆ ಸಹಕಾರಿಯಾಗಲಿದೆ ಎಂದರು.ಪಕ್ಷದ ರಾಯಚೂರು ಜಿಲ್ಲಾ ಸಂಚಾಲಕ ಶಕೀಲ್ ಅಹಮ್ಮದ್ ಮಾತನಾಡಿ, ಪ್ರತಿ ಬೂತ್ ಮಟ್ಟದಲ್ಲೂ ಹೆಚ್ಚು ಸದಸ್ಯತ್ವ ನೋಂದಣಿಗೆ ಗಮನಹರಿಸಬೇಕು. ಈ ಅಭಿಯಾನ ರಾಹುಲ್‌ಗಾಂಧಿ ಅವರ ಕನಸಿನ ಕೂಸಾಗಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪ್ರಾಮಾಣಿಕವಾಗಿ ಪಕ್ಷದ ತತ್ತ್ವ ಸಿದ್ಧಾಂತಗಳನ್ನು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಯುವಕ ರನ್ನು ಪಕ್ಷದ ಕಡೆಗೆ ಆಕರ್ಷಿಸಬೇಕು ಎಂದರು.ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಜಿಲ್ಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಯುವಕರ ನೋಂದಾವಣಿ ಪಕ್ಷಕ್ಕೆ ಆಗಬೇಕು. ಈ ಪದಾಧಿಕಾರಿಗಳ ಚುನಾವಣೆಗೆ ಬ್ಲಾಕ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಸಹಾಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಅಸ್ಲಂ ಪಾಷಾ ಸ್ವಾಗತಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೆ ಮಾರೆಪ್ಪ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.