ಶನಿವಾರ, ಮೇ 15, 2021
24 °C

ಯುವ ಕಾಂಗ್ರೆಸ್ ಮೀಸಲು ಸ್ಥಾನ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಗಲಕೋಟೆ, ಹಾವೇರಿ, ಮೈಸೂರು ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷರ ಸ್ಥಾನ ಪರಿಶಿಷ್ಟ ಜಾತಿ ಅಥವಾ ಪಂಗಡಗಳ ಅಭ್ಯರ್ಥಿಗೆ ಮೀಸಲು ಎಂದು ಘೋಷಿಸಲಾಗಿದೆ. ಉಳಿದ ಲೋಕಸಭಾ ಕ್ಷೇತ್ರಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮುಕ್ತವಾಗಿವೆ.

 

ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮೀಸಲು ಕ್ಷೇತ್ರ ಆಯ್ಕೆ ಮಾಡುವ ಪ್ರಕ್ರಿಯೆಯ ನಂತರ ಐವೈಸಿ ಪ್ರದೇಶ ಚುನಾವಣಾಧಿಕಾರಿ ವಿ.ಕೆ. ಅರಿವಳಗನ್ ಈ ಘೋಷಣೆ ಮಾಡಿದರು.ನಾಲ್ಕು ಮೀಸಲು ಲೋಕಸಭಾ ಕ್ಷೇತ್ರಗಳನ್ನು ಕ್ಷೇತ್ರಗಳ ಪ್ರತಿನಿಧಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿ ಲಾಟರಿ ಎತ್ತುವುದರ ಮೂಲಕ ಆಯ್ಕೆ ಮಾಡಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.