ಯುವ ನೀತಿ: ವಿಚಾರ ಸಂಕಿರಣ

7

ಯುವ ನೀತಿ: ವಿಚಾರ ಸಂಕಿರಣ

Published:
Updated:

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯುವ ನೀತಿ ಮಾದರಿಯಲ್ಲಿ ರಾಜ್ಯದಲ್ಲೂ ಯುವ ನೀತಿ ಜಾರಿಯಾಗಬೇಕು ಎಂದು ಆಗ್ರಹಿಸಿರುವ ಬಿಜೆಪಿ ಯುವ ಮೋರ್ಚಾ, ಇದರ ರೂಪುರೇಷೆಗಳ ಕುರಿತು ಚರ್ಚಿಸಲು ವಿಚಾರ ಸಂಕಿರಣ ಆಯೋಜಿಸಿದೆ.ಬಿಜೆಪಿ ರಾಜ್ಯ ಘಟಕದ ಕಚೇರಿ `ಜಗನ್ನಾಥ ಭವನ~ದಲ್ಲಿ ಭಾನುವಾರ ನಡೆಯಲಿರುವ ವಿಚಾರ ಸಂಕಿರಣದಲ್ಲಿ ವಿವೇಕಾನಂದ ಯೂತ್ ಮೂಮೆಂಟ್‌ನ ಸಂಸ್ಥಾಪಕ ಡಾ.ಆರ್. ಬಾಲಸುಬ್ರಹ್ಮಣ್ಯಂ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ     ಟಿ.ಎಸ್. ನಾಗಾಭರಣ, ಕ್ರೀಡಾಪಟು ಅಶ್ವಿನಿ ನಾಚಪ್ಪ ಮತ್ತಿತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್.ವಿ. ರಾಘವೇಂದ್ರ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry