ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

7

ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಬಾಗಲಕೋಟೆ:   ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು 2011-12ನೇ ಸಾಲಿನ ಯುವ ವಿಜ್ಞಾನ ಪ್ರಶಸ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪ್ರಶಸ್ತಿಯು ವಿದ್ಯಾರ್ಥಿ ವಿದ್ಯಾಥಿನಿಯರು ಕಳೆದ ಮೂರು ಶೈಕ್ಷಣಿಕ ವರ್ಷಗಳಲ್ಲಿ ಡಿಎಸ್‌ಇಆರ್‌ಟಿ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತಿತರ ಸಂಸ್ಥೆ ಗಳಿಂದ ಆಯೋಜನೆಗೊಂಡ  ಮಕ್ಕಳ ವಿಜ್ಞಾನ ಗೋಷ್ಠಿ, ಪ್ರತಿಭಾ ಕಾರಂಜಿ, ವಿಜ್ಞಾನ ನಾಟಕ ಸ್ಪರ್ಧೆ, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ರಸಪ್ರಶ್ನೆ  ಇತ್ಯಾದಿಗಳಲ್ಲಿ ಭಾಗವಹಿಸಿ ಪಡೆದು ಕೊಂಡ ಬಹುಮಾನ, ಪ್ರಶಸ್ತಿ, ಗುಣಾಂಕಗಳು ಮತ್ತು ಎನ್.ಟಿ.ಎಸ್. ಸಿ. ಪರೀಕ್ಷಾ ಫಲಿತಾಂಶಗಳ ಅಂಶ ಗಳನ್ನು ಒಳಗೊಂಡಿದೆ.ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿದ ವಿದ್ಯಾರ್ಥಿಗಳನ್ನು ಆಯ್ದು ಪ್ರಶಸ್ತಿಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತದೆ.ಅರ್ಹ ಅಭ್ಯರ್ಥಿಗಳು 15 ರಿಂದ 18 ವರ್ಷದ ಪ್ರೌಢಶಾಲಾ ಅಥವಾ ಪದವಿಪೂರ್ವ ವಿದ್ಯಾರ್ಥಿ ಗಳಾಗಿರಬೇಕು. ಅರ್ಜಿ ನಮೂನೆ ಯಲ್ಲಿ ವಿವರಗಳನ್ನು ಭರ್ತಿಮಾಡಿ, ದಾಖಲೆಗಳೊಂದಿಗೆ ತಮ್ಮ ಮುಖೋ ಪಾಧ್ಯಾಯ ಅಥವಾ ಪ್ರಾಚಾರ್ಯರ ಮೂಲಕ ಇದೇ 20 ರ ಒಳಗಾಗಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬಾಗಲಕೋಟೆ ಇವರಿಗೆ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಭವನ, ನಂ.24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70 ದೂರವಾಣಿ: 080- 26718939ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry