ಯೂತ್ ವಾಲಿಬಾಲ್: ಮುಗ್ಗರಿಸಿದ ಕರ್ನಾಟಕ

7

ಯೂತ್ ವಾಲಿಬಾಲ್: ಮುಗ್ಗರಿಸಿದ ಕರ್ನಾಟಕ

Published:
Updated:

ಕೋಲ್ಕತ್ತ (ಪಿಟಿಐ): ಪ್ರಶಸ್ತಿಯ ಭರವಸೆ ಮೂಡಿಸಿದ್ದ ಕರ್ನಾಟಕ ಬಾಲಕರ ತಂಡದವರು ಇಲ್ಲಿ ನಡೆಯುತ್ತಿರುವ 14ನೇ ರಾಷ್ಟ್ರೀಯ ಯೂತ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿದರು.

ಭಾನುವಾರ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ 25-27, 25-15, 25-20, 17-25, 15-13 ಪಾಯಿಂಟುಗಳಿಂದ ಕರ್ನಾಟಕ ತಂಡವನ್ನು ಮಣಿಸಿತು.ಕರ್ನಾಟಕ ತಂಡ ಕ್ವಾರ್ಟರ್‌ಫೈನಲ್‌ನಲ್ಲಿ ರಾಜಸ್ತಾನ ತಂಡವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ನಾಲ್ಕರಘಟ್ಟದ ಪಂದ್ಯದಲ್ಲಿ ಉತ್ತರ ಪ್ರದೇಶದ ಉತ್ತಮ ಆಟಕ್ಕೆ ಶರಣಾಯಿತು. ರಾಜ್ಯದ ಬಾಲಕಿಯರು ಕ್ವಾರ್ಟರ್ ಫೈನಲ್‌ನಲ್ಲೇ ಸೋಲು ಅನುಭವಿಸಿದ್ದರು.ಬಾಲಕಿಯರ ವಿಭಾಗದ ನಾಲ್ಕರ ಘಟ್ಟದ ಪಂದ್ಯದಲ್ಲಿ ಕೇರಳ 25-18, 25-16, 25-23ರಲ್ಲಿ ತಮಿಳುನಾಡು ತಂಡವನ್ನು ಮಣಿಸಿತು. ಮತ್ತೊಂದು ಪಂದ್ಯದಲ್ಲಿ ಪಶ್ಚಿಮ ಬಂಗಾಳ 25-21, 22-25, 25-20, 26-24ರಲ್ಲಿ ಹರಿಯಾಣ ವಿರುದ್ಧ ಗೆಲುವು ಪಡೆದು ಫೈನಲ್ ಪ್ರವೇಶಿಸಿತು. ಕಳೆದ ಬಾರಿಯ ಚಾಂಪಿಯನ್‌ಕೇರಳ ಮತ್ತೊಂದು ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry