ಬುಧವಾರ, ಏಪ್ರಿಲ್ 14, 2021
31 °C

ಯೆಮನ್: ತೀವ್ರಗೊಂಡ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸನಾ (ಎಎಫ್‌ಪಿ): ಯೆಮನ್‌ನ ಅಧ್ಯಕ್ಷ ಅಲಿ ಅಬ್ದುಲ್ಲಾ ಸಲೇಹ್ ಅವರ ಪರ ಮತ್ತು ವಿರೋಧಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ.ರಾಜಧಾನಿಗೆ ಸುತ್ತಮುತ್ತಲಿನ ಪಟ್ಟಣಗಳಿಂದ ವಾಹನಗಳಲ್ಲಿ ಬಂದ ಸಾವಿರಾರು ಜನರು ದೇಶದ ಧ್ವಜ ಮತ್ತು ಅಧ್ಯಕ್ಷರ ಭಾವಚಿತ್ರಗಳನ್ನು ಹಿಡಿದು ಅವರ ಪರವಾಗಿ         ಮೆರವಣಿಗೆ ನಡೆಸಿದರು. ವಿರೋಧಿಗಳೂ ಮೆರವಣಿಗೆ ನಡೆಸಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆಯಬಹುದು ಎಂಬ ಆತಂಕ ಉಂಟಾಗಿತ್ತು. ಆದರೆ ಭದ್ರತಾ ಪಡೆಗಳು ಅತ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರಿಂದ ಯಾವುದೇ         ಅಹಿತಕರ ಘಟನೆ ನಡೆಯಲಿಲ್ಲ.‘ನನಗೆ ಬೆಂಬಲ ನೀಡುತ್ತಿರುವವರ ಸಲುವಾಗಿ ನನ್ನ ರಕ್ತ ಮತ್ತು ನನ್ನಲ್ಲಿ ಇರುವ ಎಲ್ಲವನ್ನೂ ತ್ಯಾಗ ಮಾಡಲು ಸಿದ್ಧ’ ಎಂದು ಸಲೇಹ್ ಹೇಳಿಕೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅವರ ಪದಚ್ಯುತಿಗೆ ಆಗ್ರಹಿಸಿ ದೇಶದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.