ಭಾನುವಾರ, ಮೇ 29, 2022
23 °C

ಯೋಗೀಶ್ವರ್ ಕೈಬಿಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಗಾಸಿಟಿ ನಿವೇಶನ ಹಂಚಿಕೆ ಹಗರಣದಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಸೂಚಿಸುವಂತೆ ಕೋರಿ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜಭವ ನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿತು. `1994ರಿಂದ 2002ರ  ಅವಧಿಯಲ್ಲಿ ಮೆಗಾಸಿಟಿ ಡೆವಲ  ಪರ್ಸ್ ಅಂಡ್ ಬಿಲ್ಡರ್ಸ್ ಲಿಮಿಟೆಡ್  ಸಂಸ್ಥೆಯ ಎಂ.ಡಿ. ಆಗಿದ್ದ ಯೋಗೀಶ್ವರ್  ಸಂಸ್ಥೆಯ ಸದಸ್ಯರಿಗೆ ರೂ 37 ಕೋಟಿ ನಕಲಿ ಸಹಿ ಮೂಲಕ ವಂಚಿಸಿದ್ದಾರೆ~ ಎಂದು ಕಾಂಗ್ರೆಸ್ ಮನವಿಯಲ್ಲಿ ಆರೋಪಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.