ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಮಂಗಳವಾರ ಕಾಂಗ್ರೆಸ್ ಸೇರುವರು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕೂಡ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲೇ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರ ಜೊತೆಯಲ್ಲೇ ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುತ್ತಿರುವ ಕುರಿತು ಪತ್ರ ಸಲ್ಲಿಸಲಿದ್ದಾರೆ.

2008ರ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್, ಕೆಲ ತಿಂಗಳ ಬಳಿಕ ‘ಆಪರೇಷನ್ ಕಮಲ’ದ ಪರಿಣಾಮವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಸುಬ್ಬಾರೆಡ್ಡಿ ಕಾಂಗ್ರೆಸ್ನತ್ತ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಕೂಡ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಬ್ಬಾರೆಡ್ಡಿ ಅವರು ಕಾಂಗ್ರೆಸ್ನ ಎನ್.ಸಂಪಂಗಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಗೆಲುವು ಸಾಧಿಸಲು ತಂತ್ರ ಹೆಣೆಯುತ್ತಿರುವ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಅವರು, ಬಾಗೇಪಲ್ಲಿ ಶಾಸಕರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನಕ್ಕೆ ಕೈಹಾಕಿದ್ದರು. ಕಾಂಗ್ರೆಸ್ ನಾಯಕರ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಸುಬ್ಬಾರೆಡ್ಡಿ, ಕಾಂಗ್ರೆಸ್ ಪಕ್ಷ ಸೇರಲು ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.