ಬುಧವಾರ, ಜೂನ್ 16, 2021
22 °C

ಯೋಗೇಶ್ವರ್ ವಿಚಾರಣೆ:ಏ. 24ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಗಾಸಿಟಿ (ಬೆಂಗಳೂರು) ಡೆವಲಪರ್ಸ್ ಅಂಡ್ ಬಿಲ್ಡರ್ಸ್‌ ಲಿಮಿಟೆಡ್‌ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಅವರ ವಿಚಾರಣೆಯನ್ನು ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಏಪ್ರಿಲ್ 24ಕ್ಕೆ ಮುಂದೂಡಿದೆ.ವಾದ ಮಂಡಿಸಲು ವಕೀಲರ ಅಲಭ್ಯತೆ ಇರುವುದಾಗಿ ಯೋಗೇಶ್ವರ್ ತಿಳಿಸಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ವೆಂಕಟೇಶ್ ಆರ್ ಹುಲಗಿ ಅವರು ಪ್ರಕರಣದ ವಿಚಾರಣೆಯನ್ನು ಏ.24ಕ್ಕೆ ಮುಂದೂಡಿ ಮಂಗಳವಾರ ಆದೇಶ ಹೊರಡಿಸಿದರು.ಎಂಡಿಬಿಎಲ್ ಸಂಸ್ಥೆಯನ್ನು ಆರಂಭಿಸಿದ್ದ ಯೋಗೇಶ್ವರ್, ನಿವೇಶನ ಹಾಗೂ ಫ್ಲಾಟ್‌ಗಳನ್ನು ನೀಡುವ ನೆಪದಲ್ಲಿ ಜನರಿಂದ ಹಣ ಸಂಗ್ರಹಿಸಿ, ಹೂಡಿಕೆದಾರರಿಗೆ ವಂಚಿಸಿದ್ದಾರೆ ಎಂದು 2009ರ ಏಪ್ರಿಲ್‌ನಲ್ಲಿ ದೂರು ದಾಖಲಾಗಿತ್ತು.ಗಂಭೀರ ವಂಚನೆ ಪ್ರಕರಣಗಳ ತನಿಖಾ ಸಂಸ್ಥೆಯು(ಎಸ್‌ಎಫ್‌ಐಓ) ಇತ್ತೀಚೆಗೆ ಯೋಗೇಶ್ವರ್ ಹಾಗೂ ಅವರ ಕುಟುಂಬದವರು ಸೇರಿದಂತೆ ಇತರರ ಮೇಲೆ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ಆರು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಾಗಿದ್ದವು.ಎರಡು ಮೊಕದ್ದಮೆಗಳ ವಿಚಾರಣೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯಬೇಕಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.