ಶನಿವಾರ, ಏಪ್ರಿಲ್ 17, 2021
32 °C

ಯೋಗ್ಯ ಅಭ್ಯರ್ಥಿ ಕಣಕ್ಕೆ: ತೇಜಸ್ವಿನಿ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ:  ಈ ಕ್ಷೇತ್ರದ ಗೆಲುವು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆಯಾಗಿದ್ದು, ಪಕ್ಷದ ಹೈಕಮಾಂಡ್ ಒಬ್ಬ ಉತ್ತಮ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ಅಭಿಪ್ರಾಯಪಟ್ಟರು.ಮಂಗಳವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್‌ಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಇಚ್ಛಾಶಕ್ತಿ ಇದ್ದರೆ, ಹಣವಂತ ಅಭ್ಯರ್ಥಿಯನ್ನು ನಿಲ್ಲಿಸದೇ,  ಯೋಗ್ಯತೆ ಇರುವ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅಗತ್ಯ ಎಂದು ಅವರು ಹೇಳಿದರು.‘ಸಮಸ್ಯೆಗಳಿರುವುದು ನಾಯಕತ್ವದಲ್ಲೇ ಹೊರತು ಕಾರ್ಯಕರ್ತರಲ್ಲಿ ಅಲ್ಲ.  ಪಕ್ಷದಲ್ಲಿ ಈಗಿರುವ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕಿದೆ’ ಎಂದು ಹೇಳಿದ ಅವರು ಈ ಉಪಚುನಾವಣೆಯಲ್ಲಿ ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.ಕೆಪಿಸಿಸಿ ವೀಕ್ಷಕ ಮಾಜಿ ಸಚಿವ ವಿ.ಮುನಿಯಪ್ಪ ಮಾತನಾಡಿ, ಪರಸ್ಪರ ಟೀಕೆ ಹಾಗೂ ವಿಮರ್ಶೆ ಮಾಡಲು ಇದು ಸಕಾಲವಲ್ಲ. ‘ಆಪರೇಷನ್ ಕಮಲ’ದ ಮೂಲಕ ಬಿಜೆಪಿ ಈ ಕ್ಷೇತ್ರದಲ್ಲಿ ಉಪಚುನಾವಣೆಗೆ ಕಾರಣವಾಗಿದೆ ಎಂದು ಟೀಕಿಸಿದರು. ಮಾಜಿ ಉಪಸಭಾಪತಿ ಹಾಗೂ ವೀಕ್ಷಕ ವಿ.ಆರ್.ಸುದರ್ಶನ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ ಎಂದರು.ಕಾಂಗ್ರೆಸ್ ಮುಖಂಡ ಮಾಜಿ ಎಂಎಲ್‌ಸಿ ಎಸ್.ರವಿ ಇತರರು ಮಾತನಾಡಿದರು. ಎಚ್.ಪಿ.ವೀರಮಲ್ಲೇಶ್, ಪದ್ಮಕೃಷ್ಣಯ್ಯ, ವಿಜಯಲಕ್ಷ್ಮಿರಾಮಣ್ಣ, ಎ.ಸಿ.ವೀರೇಗೌಡ, ಚಂದ್ರಕಾಂತ್, ಡಿ.ಕೆ.ಶಿವಕುಮಾರ್, ಆಪ್ತ ಸಹಾಯಕ ವಿ.ತಿಮ್ಮೇಶ್ ಪ್ರಭು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ತಾಲ್ಲೂಕು ಗ್ರಾಮಾಂತರ ಯುವ ಕಾಂಗ್ರೆಸ್ ಆಧ್ಯಕ್ಷ ಪಿ.ಡಿ.ರಾಜು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಆರ್.ಎಂ.ಮಲವೇಗೌಡ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.