ಯೋಜನೆಗಳಿಂದ ಜನರಿಗೆ ಲಾಭ- ರೇವು ನಾಯಕ್

7

ಯೋಜನೆಗಳಿಂದ ಜನರಿಗೆ ಲಾಭ- ರೇವು ನಾಯಕ್

Published:
Updated:

ಬಸವಕಲ್ಯಾಣ: ಸರ್ಕಾರದ ವಿವಿಧ ಯೋಜನೆಗಳು ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದ್ದು ಈ ಬಗ್ಗೆ ಪ್ರಚಾರ ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ರೇವುನಾಯಕ್ ಬೆಳಮಗಿ ಅಭಿಪ್ರಾಯಪಟ್ಟರು.ಇಲ್ಲಿ ಮಂಗಳವಾರ ವಾರ್ತಾ ಇಲಾಖೆ ಮತ್ತು ತಾಲ್ಲೂಕು ಆಡಳಿತದಿಂದ ತಾಲ್ಲೂಕಿನ 120 ಗ್ರಾಮಗಳಲ್ಲಿ ನಡೆಯಲಿರುವ ಗುಲ್ಬರ್ಗ ವಿಭಾಗಮಟ್ಟದ ಬಹುಮಾಧ್ಯಮ ಪ್ರಚಾರಾಂದೋಲನ ಉದ್ಘಾಟಿಸಿ ಮಾತನಾಡಿದರು.ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಚಂದ್ರಕಾಂತ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ರವಿ ಚಂದನಕೆರೆ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಂಗಲಾಬಾಯಿ ಉದ್ರೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗುರುಲಿಂಗಪ್ಪ ಸೈದಾಪುರೆ, ಎ.ಪಿ.ಎಂ.ಸಿ. ಅಧ್ಯಕ್ಷ ಪ್ರಕಾಶ ಮೆಂಡೋಳೆ, ತಹಶೀಲ್ದಾರ ಜಗನ್ನಾಥರೆಡ್ಡಿ ಉಪಸ್ಥಿತರಿದ್ದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಬಸವರಾಜ ಚಿರಡೆ ಈ ಸಂದರ್ಭದಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry