ಗುರುವಾರ , ಮೇ 19, 2022
24 °C

ಯೋಜನೆಗಳಿಂದ ಪ್ರಯೋಜನ ಸಿಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ‘ಯೋಜನೆಗಳನ್ನು ಜನರಿಗೆ ಉಪಯೋಗವಾಗುವ ರೀತಿಯಲ್ಲಿ ರೂಪಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಜೊತೆ ಅಧಿಕಾರಿಗಳು ಸಮಾಲೋಚಿಸಬೇಕು’ ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಚನ್ನಹಳ್ಳಿ ಮತ್ತು ಬೈನಹಳ್ಳಿ ಗ್ರಾಮದ ಹರಿಜನ ಕಾಲೋನಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.‘ಕಾಮಗಾರಿ ಸ್ಥಳಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿ, ಗುಣಮಟ್ಟವನ್ನು ಪರಿಶೀಲಿಸಬೇಕು. ಎಂಜಿನಿಯರ್‌ಗಳು ಗುಣಮಟ್ಟದ ಕಾರ್ಯ ಕೈಗೊಳ್ಳುವಂತೆ ಮೇಲ್ವಿಚಾರಣೆ ನಡೆಸಬೇಕು’ ಎಂದರು. ಚನ್ನಹಳ್ಳಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದರೂ ಕೊಳಚೆ ನೀರು ಸರಾಗವಾಗಿ ಹರಿಯದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.ಜಿ.ಪಂ.ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಶುಭಾ ನರಸಿಂಹಮೂರ್ತಿ, ಎಪಿಎಂಸಿ ನಿರ್ದೇಶಕ ಶಿವಣ್ಣ, ತಾ.ಪಂ.ಸದಸ್ಯೆ ಲಕ್ಷ್ಮೀ ರಮೇಶ್, ಗ್ರಾ.ಪಂ. ಅಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಕೆ.ಶ್ರೀನಿವಾಸಯ್ಯ, ಬಿ.ಕೆ.ಮಂಜುನಾಥ ಗೌಡ, ನಾರಾಯಣಗೌಡ, ರವಿಕುಮಾರ್, ಕಾಂಗ್ರೆಸ್ ಮುಖಂಡ ಉದಯ್‌ಶಂಕರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.