ಮಂಡ್ಯ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ವಿವಿಧ ಯೋಜನೆಗಳ ಲಾಭವನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಮಿಕ ಘಟಕವು ಶಕ್ತಿ ಮೀರಿ ಯತ್ನಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಭಾನುವಾರ ಸಲಹೆ ನೀಡಿದರು.

ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಮತ್ತು ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಜನ್ಮದಿನ ಆಚರಣೆ ಸಮಾರಂಭದಲ್ಲಿ ಮಾತನಾಡಿದರು.

‘ಮಜ್ದೂರ್ ಕಾಂಗ್ರೆಸ್ ಘಟಕವು ಪಕ್ಷವನ್ನು ಬಲಪಡಿಸಲು ನಿರೀಕ್ಷಿತ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಮುದಾಯಕ್ಕೆ ವಿವಿಧ ಯೋಜನೆಗಳಿದ್ದು, ಅವುಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರಮಕೈಗೊಳ್ಳಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.

ಜಿ.ಪಂ. ಮಾಜಿ ಸದಸ್ಯೆ ಸರೋಜಮ್ಮ ಮಾತನಾಡಿದರು. ಮಾಜಿ ಶಾಸಕ ಎಸ್.ಎಂ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು.

ಮಜ್ದೂರ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುದರ್ಶನ್, ಹಾಲಹಳ್ಳಿ ರಾಮಲಿಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷರಾದ ಎಂ.ಜಿ.ರಾಜು, ಹನ್ಸಿಯಾಬಾನು, ಮುಖಂಡ ಲಿಂಗಯ್ಯ, ಗ್ರಾಮಾಂತರ ಘಟಕದ ಅಧ್ಯಕ್ಷ ಜಿ.ಸಿ.ಆನಂದ್, ನಗರ ಘಟಕದ ಅಧ್ಯಕ್ಷ ಜಬೀವುಲ್ಲಾ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.