ಬುಧವಾರ, ನವೆಂಬರ್ 20, 2019
20 °C

ಯೋಜನೆಗಳ ಸಮರ್ಪಕ ಜಾರಿಗೆ ಬಿಡಿಎ ಅಧ್ಯಕ್ಷರ ಸೂಚನೆ

Published:
Updated:

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಿವಿಧ ವಿಭಾಗಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಬಿಡಿಎ ಅಧ್ಯಕ್ಷ ಪಿ.ಎನ್.ಶ್ರೀನಿವಾಸಾಚಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದರು.ಬಿಡಿಎ ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಿದ ಅವರು ಪ್ರಾಧಿಕಾರದ ವಿಭಾಗಗಳ ಸಮನ್ವಯದ ಕೊರತೆಯಿಂದ ಯೋಜನೆಗಳು ವಿಳಂಬವಾಗುತ್ತಿವೆ. ಪ್ರಾಧಿಕಾರದ ಭೂ ಸ್ವಾಧೀನ ವಿಭಾಗ, ನಗರ ಯೋಜನಾ ವಿಭಾಗ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಒಟ್ಟಾಗಿ ಯೋಜನೆಗಳ ಸಮರ್ಪಕ ಜಾರಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)