ಯೋಜನೆ ಅನುಷ್ಠಾನಕ್ಕೆ ಸಹಭಾಗಿತ್ವ ಮುಖ್ಯ

7

ಯೋಜನೆ ಅನುಷ್ಠಾನಕ್ಕೆ ಸಹಭಾಗಿತ್ವ ಮುಖ್ಯ

Published:
Updated:

ಮೊಳಕಾಲ್ಮುರು: ಸಮುದಾಯ ಸಹಕಾರ ನೀಡಿದಲ್ಲಿ ಮಾತ್ರ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಾಧ್ಯ’ ಎಂದು ಜಿ.ಪಂ. ಸದಸ್ಯೆ ಮಾರಕ್ಕ ಹೇಳಿದರು.

ತಾಲ್ಲೂಕಿನ ಬಿ.ಜಿ. ಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯು, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ (ಎನ್‌ಆರ್‌ಎಚ್‌ಎಂ) ಅಡಿ ಹಮ್ಮಿಕೊಂಡಿದ್ದ ‘ಜನಸಂವಾದ, ಹದಿಹರೆಯದವರಿಗೆ ಸಂತಾನೋತ್ಪತ್ತಿ ಹಾಗೂ ಲೈಂಗಿಕ ಆರೋಗ್ಯ ಅರಿವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯೋಜನೆಗಳು ಅನುಷ್ಠಾನ ಆಗುವಾಗ ಸಾರ್ವಜನಿಕರು ಅದರ ಸಾಧಕ-ಬಾಧಕಗಳ ಕುರಿತು ಸಂಬಂಧಪಟ್ಟವರಿಗೆ ಮನವರಿಕೆ ಮಾಡಿಕೊಟ್ಟಲ್ಲಿ ಸಂಭವನೀಯ ತಪ್ಪುಗಳನ್ನು ತಿದ್ದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಗತವಾಗಬೇಕು ಎಂದು ಅವರು ಮನವಿ ಮಾಡಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ಗ್ರಾಮಗಳಲ್ಲಿ ನೈರ್ಮಲ್ಯ ಬಗ್ಗೆ ಜಾಗೃತಿ ಮೂಡಿಸಬೇಕು.

 

ಸ್ವಚ್ಛತೆ ಕಾಪಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯವಿದ್ದು, ಈ ಬಗ್ಗೆ ಬೇರುಮಟ್ಟದಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು.ಗ್ರಾ.ಪಂ. ಅಧ್ಯಕ್ಷ ಎಂ.ಎಲ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ. ಉಪಾಧ್ಯಕ್ಷ ಪಾಲನಾಯಕ, ಸದಸ್ಯರಾದ ಪಾಲಯ್ಯ, ಕೃಷ್ಣಪ್ಪ, ಮಂಜಣ್ಣ, ಪಿಡಿಒ ಬಸವರಾಜ್, ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಯೋಜಕ ಓಬಳೇಶ್, ‘ಹೆಲ್ಫ್’ ಸಂಸ್ಥೆಯ ಮುಖ್ಯಸ್ಥ ಪಿ. ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry