ಮಂಗಳವಾರ, ಮೇ 17, 2022
23 °C

ಯೋಜನೆ ತಿಳಿವಳಿಕೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಸರಕಾರದ ವಿವಿಧ ಯೋಜನೆ ಗಳ ಕುರಿತು ನೂತನ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಹನುಮಂತಪ್ಪ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಸ್ಥಳೀಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಮತ್ತಿತರ ಇಲಾಖೆಗಳಲ್ಲಿನ ಜನಪರ ಯೋಜನೆಗಳು ಹಾಗೂ ಗ್ರಾಮೀಣ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಜಾರಿಗೊಳ್ಳುವ ಕಾರ್ಯಕ್ರಮಗಳ ಕುರಿತು ನೂತನವಾಗಿ ಚುನಾಯಿತ ರಾದ ಸದಸ್ಯರಿಗೆ ತಿಳಿವಳಿಕೆ ನೀಡ ಬೇಕು. ಗ್ರಾಮೀಣ ಸಮಸ್ಯೆಗಳ ನಿವಾರಣೆಗೆ ಮೊದಲ ಆದ್ಯತೆ ನೀಡಬೇಕು. ಈ ಸಂಬಂಧ ಸದಸ್ಯರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅಧಿಕಾರವನ್ನು ಸಮರ್ಪಕ ವಾಗಿ ಬಳಸಿಕೊಂಡು ತಾಲ್ಲೂಕಿನ ಅಭಿವೃದ್ಧಿಗೆ ಎಲ್ಲ ಸದಸ್ಯರು ಶ್ರಮಿಸ ಬೇಕಾಗಿದೆ. ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಎಲ್ಲ ಕಾರ್ಯಕ್ರಮ ಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಕೆಲಸವಾಗಬೇಕು ಎಂದರು.ಕುಡಿತಿನಿ ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಆಗುತ್ತಿಲ್ಲ. ಗ್ರಾಮದ ಸುತ್ತಮುತ್ತಲಿನ ಮೆದುಕಬ್ಬಿಣ ಘಟಕಗಳಿಂದ ಧೂಳು ಹೆಚ್ಚಾಗಿದ್ದು, ಜನತೆ ವಿವಿಧ ರೀತಿಯ ಕಾಯಿಲೆಗಳಿಂದ ಬಳಲುವಂತಾಗಿದೆ. ಧೂಳು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸೊಳ್ಳೆಗಳ ಹಾವಳಿಯೂ ಹೆಚ್ಚುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಡುತಿನಿ ಕ್ಷೇತ್ರದ ಸದಸ್ಯೆ ಹುಚ್ಚೀರಮ್ಮ ತಿಳಿಸಿದರು.ಮೆದು ಕಬ್ಬಿಣ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯ ನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣರೆಡ್ಡಿ ಭರವಸೆ ನೀಡಿದರಲ್ಲದೆ, ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ನೀಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕೃಷಿ, ತೋಟಗಾರಿಕೆ, ಕೈಗಾರಿಕೆ, ರೇಷ್ಮೆ, ಸಾಮಾಜಿಕ ಅರಣ್ಯ, ಭೂಸೇನಾ ನಿಗಮ, ಬಿಸಿಯೂಟ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.