ಯೋಜನೆ ಸದುಪಯೋಗ ಪಡಿಸಿಕೊಳ್ಳಲು ಸಲಹೆ

ಬುಧವಾರ, ಮೇ 22, 2019
24 °C

ಯೋಜನೆ ಸದುಪಯೋಗ ಪಡಿಸಿಕೊಳ್ಳಲು ಸಲಹೆ

Published:
Updated:

ಲಕ್ಷ್ಮೇಶ್ವರ: `ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದ್ದು ಜನತೆ ಅವುಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮದ ಪ್ರಗತಿಗೆ ಕೈಜೋಡಿಸಬೇಕು~ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.ಇಲ್ಲಿಗೆ ಸಮೀಪದ ಶಿಗ್ಲಿಯಲ್ಲಿ ಮಂಗಳವಾರ ಸುವರ್ಣ ಗ್ರಾಮೋದಯ ಯೋಜನೆಯಡಿ ಸಮುದಾಯ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಗೂ 2011ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತ ಸಿಪಿಐ ಶಂಕರ ರಾಗಿ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಎಫ್. ಹಿರೇಮಠ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.`ಸುವರ್ಣ ಗ್ರಾಮೋದಯ ಯೋಜನೆಯಡಿ ತಾಲ್ಲೂಕಿನಲ್ಲಿ ಶಿಗ್ಲಿ ಹಾಗೂ ಮಾಗಡಿ ಗ್ರಾಮ ಪಂಚಾಯಿತಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು ಶಿಗ್ಲಿಯಲ್ಲಿ ಯೋಜನೆಯಡಿ ಉತ್ತಮ ಕಾಮಗಾರಿ ಆಗಿವೆ~ ಎಂದು ತಿಳಿಸಿದ ಅವರು ಮುಂಬರುವ ದಿನಗಳಲ್ಲಿ ಶಿಗ್ಲಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರೂ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಸಮುದಾಯ ನಿರ್ಮಾಣ ಮಾಡಲಾ ಗುವುದು~ ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರುಮುರಿ ಮಾತನಾಡಿದರು.

ಮಾಜಿ ಶಾಸಕ ಜಿ.ಎಸ್. ಗಡ್ಡದೇ ವರಮಠ, ಶಂಕರ ರಾಗಿ, ಪಿ.ಎಫ್. ಹಿರೇಮಠ, ಗ್ರಾಮ ಪಂಚಾ ಯಿತಿ ಉಪಾಧ್ಯಕ್ಷ ಸಿ.ಪಿ. ಬಳಿಗಾರ ಮಾತ ನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ಕೆರೂರ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪಂಚಾಯಿತಿ ಸದಸ್ಯೆ ನಿರ್ಮಲಾ ಬರದೂರ, ತಾಲ್ಲೂಕು ಪಂಚಾಯಿತಿ ಸದಸ್ಯೆಯರಾದ ಸುನಂದವ್ವ ಬಿದರಳ್ಳಿ, ಅನಸವ್ವ ಕಾಳೆ, ಎಸ್.ಕೆ. ಉಗಲಾಟದ ಮತ್ತಿತರರು ಹಾಜರಿದ್ದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry