ರಂಗನಾಯಕಮ್ಮಗೆ ವರದರಾಜು ಪ್ರಶಸ್ತಿ

7

ರಂಗನಾಯಕಮ್ಮಗೆ ವರದರಾಜು ಪ್ರಶಸ್ತಿ

Published:
Updated:

ಬೆಂಗಳೂರು: ಡಾ.ರಾಜ್‌ಕುಮಾರ್ ಅವರ  ಸೋದರ ಎಸ್.ಪಿ.ವರದರಾಜು ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ `ಎಸ್.ಪಿ.ವರದರಾಜು ಪ್ರಶಸ್ತಿ~ ಗೆ ಈ ಬಾರಿ ರಂಗಭೂಮಿ ಕ್ಷೇತ್ರದ ಕೊಡುಗೆಗಾಗಿ ಹಿರಿಯ ರಂಗನಟಿ ರಂಗನಾಯಕಮ್ಮ ಹಾಗೂ ಚಲನಚಿತ್ರ ಕ್ಷೇತ್ರದ ಕಲಾ ಸೇವೆಗಾಗಿ ಪೋಷಕ ನಟ ಅಶ್ವತ್ಥನಾರಾಯಣ ಅವರನ್ನು ಆಯ್ಕೆಮಾಡಲಾಗಿದೆ.

ಎಸ್.ಪಿ.ವರದರಾಜು ಆತ್ಮೀಯರ ಬಳಗವು ಇದೇ 28 ರ ಸಂಜೆ 6 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಚಲನಚಿತ್ರ ನಟ ಅಂಬರೀಷ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಸಮಾರಂಭದ ವಿಶೇಷ ಅತಿಥಿಯಾಗಿ ಡಾ.ರಾಜ್‌ಕುಮಾರ್ ಅವರ ಸೋದರಿ ಎಸ್.ಪಿ.ನಾಗಮ್ಮ ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry