ಬುಧವಾರ, ಜೂನ್ 16, 2021
22 °C

ರಂಗಭೂಮಿ ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಂಗಭೂಮಿ ಕಲಾವಿದರ ಮಾಸಾಶನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಹಲವು ಕಲಾವಿದರ ಸಂಘಗಳ ಸದಸ್ಯರು ನಗರದ ರವೀಂದ್ರ ಕಲಾಕ್ಷೇತ್ರದ ಎದುರು ಮಂಗಳವಾರ ಧರಣಿ ನಡೆಸಿದರು.ಕನ್ನಡ ವೇದಿಕೆ ಕಲಾವಿದರ ಘಟಕದ ಅಧ್ಯಕ್ಷ ಮಧುಬಿಲ್ಲಿನ ಕೋಟೆ ಮಾತನಾಡಿ `ರಂಗಭೂಮಿ ಕಲಾವಿದರಿಗೆ ಸರ್ಕಾರ ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದ್ದು, ಈ ವೇತನದಿಂದ ಕಲಾವಿದರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ರಂಗಭೂಮಿ ಕಲಾವಿದರ ಮಾಸಾಶನವನ್ನು ಐದು ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು~ ಎಂದು ಒತ್ತಾಯಿಸಿದರು.ದೇವಸ್ಥಾನ, ಛತ್ರಗಳಲ್ಲಿ ವಾಸ ಮಾಡುತ್ತಿರುವ ರಂಗಭೂಮಿ ಕಲಾವಿದರ ವಾಸಕ್ಕೆ ವ್ಯವಸ್ಥಿತವಾದ ನೆಲೆಯಿಲ್ಲ. ಆದ್ದರಿಂದ ಪ್ರತಿ ಜಿಲ್ಲೆಗಳಲ್ಲಿ ಗೃಹ ಮಂಡಳಿಯಿಂದ, ರಾಜೀವ್ ಗಾಂಧಿ ಗೃಹನಿರ್ಮಾಣ ಯೋಜನೆ, ಹುಡ್ಕೋ ಗೃಹ ನಿರ್ಮಾಣ ಯೋಜನೆಗಳ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು. ಜತೆಗೆ ಕಲಾವಿದರ ಮಕ್ಕಳಿಗೆ ಪದವಿ ಶಿಕ್ಷಣದವರೆಗೆ ಉಚಿತ ವಿದ್ಯಾಭ್ಯಾಸ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಮನವಿ ಮಾಡಿದರು.ಈ ಎಲ್ಲಾ ಬೇಡಿಕೆಗಳನ್ನು ಈ ಸಲದ ಬಜೆಟ್‌ನಲ್ಲಿಯೇ ಮಂಡಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಘಟಕದ ಕಾರ್ಯದರ್ಶಿ ವರದರಾಜು, ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಮ್ಮ ಸೇರಿದಂತೆ ಹಿರಿಯ ರಂಗಭೂಮಿ ಕಲಾವಿದರು ಧರಣಿಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.