ಬುಧವಾರ, ಜನವರಿ 29, 2020
23 °C

ರಂಗ ಕಲಿಕಾ ಶಿಬಿರ ‘ಮಕ್ಕಳನ್ನು ಸತ್ಪ್ರಜೆಗಳಾಗಿ ರೂಪಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪೋಷಕರು ಸಹಕಾರ ನೀಡಬೇಕು’ ಎಂದು ಚಿಲ್ಡ್ರನ್ಸ್‌ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಎನ್‌.ಆರ್‌. ನಂಜುಂಡೇಗೌಡ ಸಲಹೆ ನೀಡಿದರು.ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಬುಧವಾರ ಬೆಂಗಳೂರಿನ ಚಿಲ್ಡ್ರನ್ಸ್‌ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ರಂಗ ಕಲಿಕಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕೊಲಂಬಿಯಾದ ನಟಿ ಹಾಗೂ ನಿರ್ದೇಶಕಿ ಅನಾ ಮಸಾರಿ ಮಾತನಾಡಿ, ‘ಬಾಲ್ಯದಿಂದಲೇ ರಂಗ ಕಲೆಯಲ್ಲಿ ಆಸಕ್ತಿ ಬರುವಂತೆ ಮಾಡಿ ಮಕ್ಕಳಿಗೆ ದೇಶದ ಕಲೆ– ಸಂಸ್ಕೃತಿ ಬಗ್ಗೆ ತಿಳಿಸಿಕೊಡಬೇಕು. ಇದರಿಂದ

ದೇಶದ ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಗಳನ್ನು ಜೀವಂತವಾಗಿರಿಸಬಹುದು’ ಎಂದರು.ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಶಿಕ್ಷಣಾಧಿಕಾರಿ ಚಂದ್ರಶೇಖರ್‌, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್‌.ಬಿ. ಮದನಗೌಡ, ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಬಿ. ಚಂದ್ರಶೇಖರ್‌ ಹಾಜರಿದ್ದರು.

ಪ್ರತಿಕ್ರಿಯಿಸಿ (+)