ಭಾನುವಾರ, ಜುಲೈ 25, 2021
28 °C

ರಕ್ತದಾನಕ್ಕೆ ಮುಂದಾಗಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಲಯನ್ಸ್ ಕ್ಲಬ್ ಬೆಂಗಳೂರು ದಕ್ಷಿಣ, ರೆಡ್‌ಕ್ರಾಸ್ ರಕ್ತನಿಧಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯ  ಸಂಯುಕ್ತ ಆಶ್ರಯದಲ್ಲಿ ರಾಜಾನುಕುಂಟೆಯಲ್ಲಿರುವ ಸಾಯಿವಿದ್ಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.ಶಿಬಿರ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ನಿರ್ದೇಶಕ ಪ್ರೊ. ಎಂ.ಆರ್.ಹೊಳ್ಳ, ಆಪತ್ಕಾಲದಲ್ಲಿ  ಮನುಷ್ಯನ ಜೀವ ಉಳಿಸಲು ಅತ್ಯವಶ್ಯಕವಾಗಿ ಬೇಕಾಗಿರುವ ರಕ್ತವನ್ನು ಸಂಗ್ರಹಿಸಿಟ್ಟು ಕೊಳ್ಳುವುದು ಅತಿ ಮುಖ್ಯ. ಈ ದಿಸೆಯಲ್ಲಿ ಇದರ ಮಹತ್ವವನ್ನು ಅರಿತು ವಿದ್ಯಾರ್ಥಿಗಳು ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಕೆ.ಶಶಿಧರ್ ಶಾಸ್ತ್ರಿ, ಬೆಂಗಳೂರು ದಕ್ಷಿಣ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಡಾ. ಎ.ಸಿನ್ಹ, ರಾಷ್ಟ್ರೋತ್ಥಾನ ಪರಿಷತ್‌ನ ಡಾ. ಸುಂದರ್ ಮೊದಲಾದವರು ಭಾಗವಹಿಸಿದ್ದರು. ಶಿಬಿರದಲ್ಲಿ 280 ಯುನಿಟ್ ರಕ್ತ ಸಂಗ್ರಹಿಸಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.