ಮಂಗಳವಾರ, ಮೇ 11, 2021
26 °C

ರಕ್ತದಾನಕ್ಕೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಕ್ತದಾನದಿಂದ ದೆಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ರಕ್ತದಲ್ಲಿರುವ ಕೊಬ್ಬಿನ ಅಂಶ ಕಡಿಮೆ ಆಗುತ್ತದೆ'  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಬಿ.ಎನ್.ಧನ್ಯಕುಮಾರ್ ತಿಳಿಸಿದರು.ಕರ್ನಾಟಕ ಸ್ವಯಂ ರಕ್ತದಾನಿಗಳ ಒಕ್ಕೂಟ, ಭಾರತ ಸ್ವಯಂ ರಕ್ತದಾನಿಗಳ ಒಕ್ಕೂಟ ಹಾಗೂ ಶೇಷಾದ್ರಿಪುರ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಶೇಷಾದ್ರಿಪುರ ಕಾಲೇಜು ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ವಿಶ್ವ ರಕ್ತದಾನಿಗಳ ದಿನಾಚರಣೆ'ಯಲ್ಲಿ ಅವರು ಮಾತನಾಡಿದರು.ಕರ್ನಾಟಕ ಸ್ವಯಂ ರಕ್ತದಾನಿಗಳ ಒಕ್ಕೂಟದ ಅಧ್ಯಕ್ಷ ರಾಜು ಚಂದ್ರಶೇಖರ್ ಮಾತನಾಡಿ, `ದೇಶದಲ್ಲಿ ಒಟ್ಟು 152 ದಶಲಕ್ಷ ಲೀಟರ್ ರಕ್ತಕ್ಕೆ ಬೇಡಿಕೆ ಇದೆ. 96 ಲಕ್ಷ ಲೀಟರ್ ರಕ್ತ ಸಂಗ್ರಹವಾಗುತ್ತಿದೆ ಎಂದರು.ಶೇಷಾದ್ರಿಪುರ ಶಿಕ್ಷಣ ಟ್ರಸ್ಟ್ ಡಾ. ವೂಡೆ ಪಿ.ಕೃಷ್ಣ ಮಾತನಾಡಿದರು.ಶೇಷಾದ್ರಿಪುರ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಎನ್.ಆರ್.ಪಂಡಿತಾರಾಧ್ಯ ಅಧ್ಯಕ್ಷತೆ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.