ರಕ್ತದಾನದ ಅರಿವು ಮೂಡಿಸಿ: ಶಾಸಕ

7

ರಕ್ತದಾನದ ಅರಿವು ಮೂಡಿಸಿ: ಶಾಸಕ

Published:
Updated:

ಹಾಸನ: ಜೀವ ರಕ್ಷಕ ದ್ರವವಾದ ರಕ್ತವನ್ನು ಎಲ್ಲ ಆರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಹಾಗೂ ಇದರ ಮಹತ್ವದ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಶಾಸಕ ಎಚ್.ಎಸ್.ಪ್ರಕಾಶ್ ತಿಳಿಸಿದರು.ನಗರದ ಹಾಸನ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಸಭಾಂಗಣ ದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ,ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ `ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಮತ್ತು ರಕ್ತದಾನ ಶಿಬಿರ~ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂದರ್ಭದಲ್ಲಿ ರಕ್ತದಾನ ಶಿಬಿರ ಏರ್ಪಡಿಸಿರುವುದು ಸ್ವಾಗತಾರ್ಹ ಎಂದರು.ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಮಾತನಾಡಿ, ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗಲಿದೆ, ಮೂಢ ನಂಬಿಕೆಯನ್ನು ತೊರೆದು ರಕ್ತದಾನದಂಥ ಉತ್ತಮ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.ಸಮಾರಂಭಕ್ಕೂ ಮುನ್ನಾ ಜಿಲ್ಲಾಧಿಕಾರಿ ಆವರಣದಿಂದ ಹಮ್ಮಿಕೊಂಡಿದ್ದ ಜಾಥಾದಲ್ಲಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನವಿಲೆ ಅಣ್ಣಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೆ.ಶಂಕರ್, ಡಾ.ಪಿ.ಎಲ್.ನಟರಾಜ್ ಉಪಸ್ಥಿತರಿದ್ದರು.ರವಿಕುಮಾರ್ ಸ್ವಾಗತಿಸಿದರು, ಗಣೇಶ್ ಉಡುಪ ನಿರೂಪಿಸಿ, ಡಾ.ಶಂಕರ್ ವಂದಿಸಿದರು.  `ರಕ್ತದಾನ ಮಾಡಿ ಜೀವ ಉಳಿಸಿ~


ಜಾವಗಲ್: ರಕ್ತದಾನ ಜೀವದಾನವಾಗಿದ್ದು, 1ಯೂನಿಟ್ ರಕ್ತ 4 ಜೀವಗಳನ್ನು ಉಳಿಸಬಲ್ಲದು ಎಂದು ಹಾಸನ ಜೀವ ರಕ್ಷಾ ರಕ್ತ ನಿಧಿ ಕೇಂದ್ರದ ಟೆಕ್ನಿಕಲ್ ಸೂಪರ್ ವೈಸರ್ ಮೋಹನ್ ತಿಳಿಸಿದರು.  ಪಟ್ಟಣದ ಮಾಡೆಲ್ ಆಂಗ್ಲ ಶಾಲೆಯಲ್ಲಿ ಸೋಮವಾರದಂದು ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಶೇಖರೇಗೌಡರ ಸ್ಮರಣಾರ್ಥ ಹಾಗೂ ಅಂತರರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.ವೈದ್ಯಾಧಿಕಾರಿ ಡಾ.ಪ್ರೇಮಾನಂದ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ರಾಜೇಶ್ವರಿ ಶಿವಾನಂದ್, ಸಂಸ್ಥೆಯ ಕಾರ್ಯದರ್ಶಿ ಡಾ.ವಿನಾಯಕ್, ವರ್ತಕರಾದ ಜೆ.ಎಂ.ಪ್ರಸನ್ನ, ಜೆ.ಎಂ. ಜಯರಾಜ್ ಮುಖ್ಯ ಶಿಕ್ಷಕ ಪ್ರಸನ್ನ ಕುಮಾರ್ ದಯಾನಂದ್ ಸ್ವಾಮಿ ಇದ್ದರು. 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry