ಶುಕ್ರವಾರ, ಮೇ 14, 2021
25 °C

ರಕ್ತದಾನ- ಉಡುಪಿ ಮುಂಚೂಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂದಾರ್ತಿ (ಬ್ರಹ್ಮಾವರ): `ಜಿಲ್ಲೆಯ ಜನತೆಯಲ್ಲಿ ಹತ್ತು ವರ್ಷಗಳ ಹಿಂದೆ ರಕ್ತದಾನದ ಬಗ್ಗೆ ತಿಳುವಳಿಕೆ ಕಡಿಮೆ ಇತ್ತು. ಆದರೆ ಇಂದು ಮೊಗವೀರ ಸಂಘಟನೆಗಳಂತಹ ಸಂಘ ಸಂಸ್ಥೆಗಳಿಂದಾಗಿ ಗ್ರಾಮೀಣ ಜನರೂ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದೆ ಬರುತ್ತಿದ್ದಾರೆ~ ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದರು.ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಮಣಿಪಾಲ ವಿಶ್ವವಿದ್ಯಾನಿಲಯದ ರಕ್ತನಿಧಿ ವಿಭಾಗ ಮತ್ತು ಮೊಗವೀರ ಯುವ ಸಂಘಟನೆ ಮಂದಾರ್ತಿ ಘಟಕ ಮತ್ತು ಜಿಲ್ಲಾ ಮೊಗವೀರ ಯುವ ಸಂಘಟನೆಯ ಆಶ್ರಯದಲ್ಲಿ ಮಂದಾರ್ತಿ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರ ಮತ್ತು 5 ಸಾವಿರಕ್ಕೂ ಅಧಿಕ ಯೂನಿಟ್ ರಕ್ತದಾನ ಶಿಬಿರದ ಸಮಾರೋಪ ಉದ್ಘಾಟಿಸಿ ಅವರು ಮಾತನಾಡಿದರು.

`ಉಡುಪಿ ಜಿಲ್ಲೆ ರಕ್ತದಾನದಲ್ಲಿ ಮುಂಚೂಣಿಯಲ್ಲಿದೆ. ಇಂತಹ ಶಿಬಿರಗಳ ಮೂಲಕ ರಕ್ತದಾನ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಬೇಕಾಗಿದೆ~ ಎಂದರು.ಸಂಘಟನೆಯ ವರ್ಷದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ   ಜಿ.ಶಂಕರ್ ಅವರ ಪುತ್ರಿ ಶ್ಯಾಮಿಲಿ, ಮೊಗವೀರ ಯುವ ಸಂಘಟನೆಯ ಮಂದಾರ್ತಿ 6040 ಯೂನಿಟ್ ರಕ್ತ ಸಂಗ್ರಹವಾಗಿದೆ.ಮಣಿಪಾಲ ವಿ.ವಿ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಶಾಂತಾ ವಿ.ಎಸ್.ಆಚಾರ್ಯ, ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಜಿ.ಶಂಕರ್, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಆರ್.ಆರ್.ಪುಲ್‌ಗಾಂವ್ಕರ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಜಿ.ಪಂ. ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ದ.ಕ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಒಕ್ಕೂಟದ ಅಧ್ಯಕ್ಷ ಯಶಪಾಲ್ ಸುವರ್ಣ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಎಸ್.ಜಿ.ನಾಯಕ್, ಮಣಿಪಾಲ ರಕ್ತನಿಧಿ ವಿಭಾಗದ ನಿರ್ದೇಶಕಿ ಡಾ.ಸುಧಾ ಎಸ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ್ ಕುಂದರ್, ಕೋಟದ ಉದ್ಯಮಿ ಆನಂದ್ ಸಿ.ಕುಂದರ್, ಬಾರ್ಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್, ಬಾರ್ಕೂರು ಸಂಯುಕ್ತ ಸಭಾ ಅಧ್ಯಕ್ಷ ತಿಮ್ಮ ಮರಕಾಲ, ಘಟಕದ ಅಧ್ಯಕ್ಷ ರಾಘವೇಂದ್ರ ಅಲೆಯ, ಶಿವರಾಂ ಮತ್ತಿತರರು ಪಾಲ್ಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.