ಬುಧವಾರ, ಮೇ 12, 2021
24 °C

ರಕ್ತದಾನ ಪವಿತ್ರ ಕಾರ್ಯ: ತಿಪ್ಪಾರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹಲವು ಸಂಘಟನೆಗಳು, ವೇದಿಕೆಗಳು ಇಂದು ಹುಟ್ಟಿಕೊಳ್ಳುತ್ತಿವೆ. ಆದರೆ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಕೈಗೊಳ್ಳುತ್ತಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ಕೇವಲ ನೆಲ, ಜಲ, ಭಾಷೆಯ ಉಳಿವಿಗಾಗಿ ಮಾತ್ರ ಹೋರಾಟ ನಡೆಸದೆ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಶ್ಲಾಘನೀಯ ಕಾರ್ಯ ಕೈಗೊಂಡಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡರ 47ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕರವೇ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ರಕ್ತ ದೊರೆಯದೆ ಹಲವರು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳು ಇವೆ. ಆದ್ದರಿಂದ ರಕ್ತದಾನ ಪವಿತ್ರವಾದ ಕಾರ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನಾ ಬಗೆಯ ರೋಗಗಳಿಗೆ ಜನತೆ ತುತ್ತಾಗುತ್ತಿರುವುದರಿಂದ ರಕ್ತದ ಅಗತ್ಯವಿದೆ. ಅಪಘಾತ ಮತ್ತು ಹೆರಿಗೆ ಸಂದರ್ಭಗಳಲ್ಲಿ ರಕ್ತಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಈ ರೀತಿಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನುಡಿದರು.ಕಬೀರಾನಂದಾಶ್ರಮದ ಶಿವ ಲಿಂಗಾನಂದ ಸ್ವಾಮೀಜಿ ಮಾತನಾಡಿ, ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಠವಾಗಿದೆ. ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ಮತ್ತಷ್ಟು ನಡೆಯಬೇಕು ಎಂದು ತಿಳಿಸಿದರು.ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ಹನ್ನೆರಡು ವರ್ಷಗಳಿಂದಲೂ ನಿರಂತರವಾಗಿ ರಕ್ತದಾನ ಮಾಡಿಕೊಂಡು ಬರುತ್ತಿರುವುದು ದೊಡ್ಡ ಸಾಧನೆ ಎಂದು ಕೊಂಡಾಡಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್.ಮಂಜುನಾಥ್. ನಗರಸಭೆ ಸದಸ್ಯರಾದ ಟಿ.ರಮೇಶ್, ತಿಮ್ಮಣ್ಣ, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ವಿಜಯಕುಮಾರ್, ಕರವೇ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.