ಶನಿವಾರ, ಮೇ 8, 2021
26 °C

`ರಕ್ತದಾನ ಮಾಡುವಾಗ ಎಚ್ಚರ ವಹಿಸಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ:`ರಕ್ತದಾನ ಮಾಡುವಾಗ ಎಚ್ಚರ ವಹಿಸಿ, ರಕ್ತದಾನದಿಂದ ಬರುವ ರೋಗ ಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ' ಎಂದು ಹೈಟೆಕ್ ಆಸ್ಪತ್ರೆಯ ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ `ವಿಶ್ವ ರಕ್ತ ದಾನಿಗಳ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಭಿವೃದ್ಧಿಯ ವೇಗದಲ್ಲಿ ಮನುಷ್ಯ ಎಲ್ಲವನ್ನೂ ಸಾಧಿಸಲು ಹೊರಟು ಅನಾಹುತಗಳಿಗೆ ಕಾರಣನಾಗುತ್ತಿದ್ದಾನೆ. ಇದರಿಂದ ಅಪಘಾತಗಳು ಹೆಚ್ಚುತ್ತಿದೆ, ಅಪಘಾತಗಳನ್ನು ತಡೆಗಟ್ಟಿದರೆ ರಕ್ತದಾನದ ಬೇಡಿಕೆಯು ಕಡಿಮೆಯಾಗ ಬಹುದು.ಅಪಘಾತಗಳು ಸಂಭವಿಸಿದಾಗ ಪ್ರಥಮ ಚಿಕಿತ್ಸೆ ಅಗತ್ಯವಾಗಿದ್ದು, ಅದರ ಬಗ್ಗೆ ಉಡುಪಿ ಜಿಲ್ಲೆಯ ಶಾಲಾ ಮಕ್ಕಳಿಗೆ ಅರಿವು ಮೂಡಿಸಲು ಉಡುಪಿ ಶಾಸಕರೊಂದಿಗೆ ಮಾತುಕತೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.25ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ಉಡುಪಿಯ ಕೆ. ಮಂಜುನಾಥ್, ಮುದರಂಗಡಿಯ ದೇವದಾಸ್ ಪಾಟ್ಕರ್, ವಿಶು ಶೆಟ್ಟಿ ಅಂಬಲಪಾಡಿ, ಕಾಪುವಿನ ಸೂರಿ ಶೆಟ್ಟಿ, ಅಬ್ದುಲ್ ರಶೀದ್, ಹಾಗೂ ಚಂದ್ರಹಾಸ ಡಿ ಪ್ರಭು ಅವರನ್ನು ಸನ್ಮಾನಿಸಲಾಯಿತು.ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.

ಐಎಂಎ ಕರಾವಳಿ ಅಧ್ಯಕ್ಷ ಡಾ.ವೈ.ಜಿ.ಅಶೋಕ್‌ಕುಮಾರ್, ಲಯನ್ಸ್ ಜಿಲ್ಲಾ ಗವರ‌್ನರ್ ಡಾ.ಮಧುಸೂದನ ಹೆಗ್ಡೆ,ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕದ ಕೋಶಾಧಿಕಾರಿ ಟಿ.ಚಂದ್ರಶೇಖರ್ ಉಪಸ್ಥಿತರಿದ್ದರು.ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕದ ಉಪ ಸಭಾಪತಿ ಡಾ.ಉಮೇಶ್ ಪ್ರಭು ಸ್ವಾಗತಿಸಿದರು. ಕಾರ್ಯದರ್ಶಿ ಜಾರ್ಜ್ ಸ್ಯಾಮುವೆಲ್ ವಂದಿಸಿದರು. ಜಯರಾಮ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.