ಮಂಗಳವಾರ, ಮೇ 18, 2021
22 °C

ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್ (ಪಿಟಿಐ): ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ನೀಡಲು ಭಾರತ ಮತ್ತು ಆಸ್ಟ್ರೇಲಿಯಾ ನಿರ್ಧರಿಸಿವೆ.

ಕ್ಯಾನ್‌ಬೆರಾದಲ್ಲಿ ಬುಧವಾರ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ಎ.ಕೆ.ಆಂಟನಿ ಮತ್ತು ಆಸ್ಟ್ರೇಲಿಯಾ ರಕ್ಷಣಾ ಸಚಿವ ಸ್ಟೀಫನ್ ಸ್ಮಿತ್ ಈ ನಿರ್ಧಾರ ಕೈಗೊಂಡಿದ್ದಾರೆ.`ಸಮುದ್ರದಲ್ಲಿನ ಸುರಕ್ಷತೆ, ರಕ್ಷಣಾ ಕ್ಷೇತ್ರದಲ್ಲಿ ಬಾಂಧವ್ಯ ವೃದ್ಧಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ಅಂತರರಾಷ್ಟ್ರೀಯ ಮತ್ತು ಪ್ರಾಂತೀಯ ಸುರಕ್ಷತೆ ಕುರಿತು ಸಭೆಯಲ್ಲಿ ಉಭಯ ಮುಖಂಡರು ತೀವ್ರ ಕಳವಳ ವ್ಯಕ್ತಪಡಿಸಿದರು' ಎಂದು ಆಸ್ಟ್ರೇಲಿಯಾ ರಕ್ಷಣಾ ಸಚಿವಾಲಯ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.