ಗುರುವಾರ , ಮೇ 26, 2022
30 °C

ರಚನಾತ್ಮಕ ಕಾರ್ಯಕ್ಕೆ ಸಹಕಾರ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ:  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ನಿರಂತರ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸುವ ರಚನಾತ್ಮಕ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದು ಜಿಲ್ಲಾ ರೈತ ಹೋರಾಟ ಸಮಿತಿ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.



ಅವರು ಮಂಗಳವಾರ ಪಟ್ಟಣದ ಮಹಾತ್ಮಾಗಾಂಧಿ ಗ್ರಾಮೀಣ ಜನ ಕಲ್ಯಾಣ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಆಯೋಜಿಸಿದ್ದ ನಗೆ ಹಬ್ಬ ಹಾಗೂ ವಿದ್ಯಾರ್ಥಿಗಳ ಪ್ರಥಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. 



 ಪ್ರತಿ ವರ್ಷದಂತೆ ಈ ವರ್ಷವು ಕೂಡ ಶಿವರಾತ್ರಿಯ ಮುನ್ನಾ ದಿನ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಪಟ್ಟಣದ ಜನತೆಗೆ ರಂಜಿಸುತ್ತಿದ್ದಾರೆ. ಕನ್ನಡ ನಾಡು,ನುಡಿ, ನೆಲ,ಜಲ ರಕ್ಷಣೆಗೆ ಹೋರಾಟ ನಡೆಸುತ್ತಿರುವ ಕರವೇ ಕಾರ್ಯ ಶ್ಲಾಘನೀಯವೆಂದು ಹಿರೇಮಠ ತಿಳಿಸಿದರು.



ಇದಕ್ಕೂ ಮುನ್ನ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರವೇ ರಾಜ್ಯ ಸಂಚಾಲಕ ಬಸವರಾಜ ಪಡುಕೋಟಿ ಮಾತನಾಡಿ, ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವಂತೆ ಹೋರಾಟ ತೀವೃಗೊಳಿಸಲಾಗಿದೆ. ಹಿಂದುಳಿದ ಹೈ-ಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೂಡಲೇ ಸಂವಿಧಾನದ 371ನೇ ಕಲಂ ಜಾರಿಗೆ ಒತ್ತಾಯಿಸಿ ಗುಲ್ಬರ್ಗದಲ್ಲಿ ಶೀಘ್ರ ಉಗ್ರಸ್ವರೂಪದ ಹೋರಾಟ ರೂಪಿಸುವುದಾಗಿ ತಿಳಿಸಿದರು. ಕಲಾವಿದರಾದ ರವಿ ಭಜಂತ್ರಿ, ಇಂದುಮತಿ ಸಾಲಿಮಠ, ಮಹಾದೇವ ಸತ್ತಿಗೇರಿ ಸಾರ್ವಜನಿಕರನ್ನು ನಗೆಗಡಲಲ್ಲಿ ತೇಲಿಸಿದರು. 



ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಡಾ.ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ, ಕರವೇ ಜಿಲ್ಲಾಧ್ಯಕ್ಷ ಕಲ್ಯಾಣರಾವ್ ಪಾಟೀಲ, ಮಹಿಳಾ ಅಧ್ಯಕ್ಷೆ ರಮಾಬಾಯಿ ಕುಲಕರ್ಣಿ, ತಾಲ್ಲೂಕು ಅಧ್ಯಕ್ಷ ಸುಧೀಂದ್ರ ಇಜೇರಿ, ಜಿ.ಪಂ.ಮಾಜಿ ಸದಸ್ಯ ಅಶೋಕ ಸಾಹು ಗೋಗಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಗಿರೀಶ ಪಡಶೆಟ್ಟಿ, ಶಿವಪುತ್ರಪ್ಪ ಕೋಣಿನ್, ಡಿ.ಬಿ.ಪಾಟೀಲ, ಪ.ಪಂ.ಅಧ್ಯಕ್ಷೆ ಬಾಯಮ್ಮ ತಳವಾರ, ಶಾಂತಪ್ಪ ಕೂಡಲಗಿ, ಪ.ಪಂ. ಸದಸ್ಯ ಮಹಾಂತಯ್ಯ ಹಿರೇಮಠ, ವಸಂತರಾವ್ ನರಿಬೋಳ, ಗುರುರಾಜ ಸುಬೇದಾರ, ಮರೆಪ್ಪ ಸರಡಗಿ ಸೇರಿದಂತೆ ಅನೇಕ ಗಣ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಪ್ರಬಂಧ,ಹಾಡುಗಳು ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತಿಯ ಸ್ಥಾನ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಿಂಗಪ್ಪ ಪೂಜಾರಿ ಸ್ವಾಗತಿಸಿದರು, ಮರೆಪ್ಪ ಬೇಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಲಾಲಪ್ಪ ನಾಯಕ ನಿರೂಪಿಸಿದರು, ಶರಣಗೌಡ ಸರಡಗಿ ವಂದಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.