ಶುಕ್ರವಾರ, ಮೇ 14, 2021
30 °C

ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ರಾಜ್ಯದ 123 ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶದಂತೆ ತಾಲ್ಲೂಕಿನ ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಸಂಧರ್ಭದಲ್ಲಿ ಮಧ್ಯಾಹ್ನದ ಬಿಸಿಊಟ ಕಲ್ಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಆರ್ಥಿಕ ಸಚಿವಾಲಯ ನಿರ್ದೇಶನದಂತೆ ತಾಲ್ಲೂಕಿನ  ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ರಜೆ ಸಂದರ್ಭದ್ಲ್ಲಲೂ ಮಧ್ಯಾಹ್ನದ ಬಿಸಿಊಟ ಮುಂದುವರಿಸಲಾಗಿದೆ. ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು ಕಡ್ಡಾಯವಾಗಿ ಹಾಜರಾಗಿ ವಿದ್ಯಾರ್ಥಿಗಳಿಗೆ ಬಿಸಿ ಊಟ ವಿತರಿಸಬೇಕು. ಈ ಸಂಬಂಧ ವ್ಯಾಪಕ ಪ್ರಚಾರ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.ಕುಡಿಯುವ ನೀರು, ವಿದ್ಯಾರ್ಥಿಗಳ ಹಾಜರಿಗೆ ಅನುಗುಣವಾಗಿ ಬಿಸಿಊಟ ಸಿದ್ಧಪಡಿಸಬೇಕು. ಸುರಕ್ಷತೆ ದೃಷ್ಟಿಯಿಂದ ಅಡುಗೆ ಕೋಣೆಗೆ ವಿದ್ಯಾರ್ಥಿಗಳ ಪ್ರವೇಶ ನಿಷೇಧಿಸಲಾಗಿದೆ. ತಾಲ್ಲೂಕು ಮಟ್ಟದ ಜಾಗೃತಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.ಅಭಿನಂದನೆ: 2012-13ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸಹಕರಿಸಿದ ತಹಶೀಲ್ದಾರ್ ಟಿ.ಎ.ಹನುಮಂತರಾಯ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.ಜಯರಾಂ, ಬಿ.ಆರ್.ಸಿ ಸಮನ್ವಯಾಧಿಕಾರಿ ಎನ್. ವೆಂಕಟೇಶಪ್ಪ, ಪೊಲೀಸ್, ಶಿಕ್ಷಣ ಇಲಾಖೆ ಹಾಗೂ ಕೇಂದ್ರದ ಮುಖ್ಯಸ್ಥರಿಗೆ ಕೆ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.