ಸೋಮವಾರ, ಜೂನ್ 21, 2021
23 °C

ರತ್ನಮ್ಮಗೆ ರಾಜ್ಯಮಟ್ಟದ ಆದರ್ಶ ಶಿಕ್ಷಕಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ಸಮೀಪದ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ರತ್ನಮ್ಮ ಅವರು ರಾಜ್ಯಮಟ್ಟದ ಆದರ್ಶ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.



ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿರುವ ವಿಶ್ವಚೇತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಶಿವಬಸಪ್ಪ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕ ಶಂಕರ್.ಲಿ ಸಾಗರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.



ಸಂಸ್ಥೆ ಅಧ್ಯಕ್ಷರಾದ ದುರ್ಗಪ್ಪ ರಾ, ಮಾಪರ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ ಹೂವುಗಾರ್. ಶಾಸಕ ವಿಶ್ವನಾಥ ಪಾಟೀಲ್, ವಿಧಾನ ಪರಿಷತ್‌ ಸದಸ್ಯ ಮಹಂತೇಶ್ ಕೌಜಲಗಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.