ರಥಯಾತ್ರೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

7

ರಥಯಾತ್ರೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published:
Updated:

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜನಚೇತನ ರಥಯಾತ್ರೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್, ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ರಾಜ್ಯದಲ್ಲಿ ಯಾತ್ರೆ ತೆರಳುವ ಮಾರ್ಗದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಭ್ರಷ್ಟಾಚಾರ ಮುಕ್ತ ಸ್ವಚ್ಛ ಆಡಳಿತ ಘೋಷವಾಕ್ಯದ ಈ ಯಾತ್ರೆಗೆ ನಿಜಕ್ಕೂ ಅರ್ಥ ಇಲ್ಲ. ಅವರದೇ ಪಕ್ಷದ ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವರು ಜೈಲು ಪಾಲಾಗಿದ್ದಾರೆ. ಈ ಸಂದರ್ಭದಲ್ಲಿ ಭ್ರಷ್ಟಾಚಾರ ವಿರುದ್ಧದ ಹೋರಾಟ ಯಾರಿಗಾಗಿ ಎಂದು ಅವರು ವಾಗ್ದಾಳಿ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry