ಗುರುವಾರ , ಫೆಬ್ರವರಿ 25, 2021
19 °C
ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್‌ ಉವಾಚ

ರಮ್ಯಾಗೆ ಹುದ್ದೆ: ಹೈಕಮಾಂಡ್‌ಗೆ ಬಿಟ್ಟಿದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಮ್ಯಾಗೆ ಹುದ್ದೆ: ಹೈಕಮಾಂಡ್‌ಗೆ ಬಿಟ್ಟಿದ್ದು

ಮಂಡ್ಯ: ‘ಮಾಜಿ ಸಂಸದೆ ರಮ್ಯಾ ಅವರಿಗೆ ಯಾವ ಹುದ್ದೆ ನೀಡಿದರೂ ಸಂತೋಷ. ಅವರನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಸಚಿವರನ್ನಾಗಿ ಮಾಡುವ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳಬೇಕು. ಅದು ನನ್ನ ಕೈಯಲ್ಲಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್‌ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಸಮೀಪದ ಸ್ವರ್ಣಸ್ವಂದ್ರದಲ್ಲಿ ನಗರಸಭೆ ಹಮ್ಮಿಕೊಂಡ ‘ಸಸಿ ನೆಡುವ ಯೋಜನೆ’ಗೆ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್‌ ಅವರು ಸಸಿ ನೆಡುವ ಮೂಲಕ ಗುರುವಾರ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.‘ಮಂಡ್ಯದವರಿಗೆ ಯಾವುದೇ ಅಧಿಕಾರ ನೀಡಿದರೂ ನನಗೆ ಬೇಜಾರಿಲ್ಲ. ರಮ್ಯಾ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಪಕ್ಷದ ವರಿಷ್ಠರನ್ನು ಒತ್ತಾಯಿಸಲು ಕೆಲವರು ನಿಯೋಗ ತೆರಳಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ಹೇಳಿದರು.ಆತಂಕ ಇಲ್ಲ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಯಾವುದೇ ಅಡ್ಡಿ, ಆತಂಕಗಳು ಎದುರಾಗುವುದಿಲ್ಲ ಎಂದು ಭಾವಿಸಿದ್ದೇನೆ. ನಗರದ ರಸ್ತೆ ಬದಿಯಲ್ಲಿ ಸರ್ಕಾರಿ ಕಚೇರಿಗಳೇ  ಹೆಚ್ಚಿವೆ. ಅವುಗಳ ಕಾಂಪೌಂಡ್‌ ಕೆಡವಬೇಕಾಗಬಹುದು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಯಲ್ಲಿಯೇ ಬೈಪಾಸ್ ನಿರ್ಮಾಣ ಕಾಮಗಾರಿಯೂ ನಡೆಯಲಿದೆ. ನಗರ ಅಥವಾ ಪಟ್ಟಣಗಳ ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಅಸಾಧ್ಯ. ಹೀಗಾಗಿ, ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡುವುದು ಅನಿವಾರ್ಯವಾಗಿದೆ ಎಂದರು.ಬೆಂಗಳೂರು– ಮೈಸೂರು ನಡುವಿನ ಬಹುತೇಕ ಪಟ್ಟಣ, ನಗರಗಳ ಪ್ರಮುಖ ಬೇಡಿಕೆಯಂತೆ ಬೈಪಾಸ್ ನಿರ್ಮಾಣ ಯೋಜನೆಗೂ ಚಾಲನೆ ಸಿಗುತ್ತಿದೆ. ಮಂಡ್ಯದಲ್ಲಿ ಬೈಪಾಸ್ ಜತೆಗೆ ಫ್ಲೈ ಓವರ್  ನಿರ್ಮಾಣ ಮಾಡಬೇಕು ಎಂಬುದು ನನ್ನ ಆಸೆಯಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಕೆರಗೋಡು ಸೋಮಶೇಖರ್‌್, ಅರುಣ್‌ಕುಮಾರ್, ಮುಖಂಡರಾದ ಅಮರಾವತಿ ಚಂದ್ರಶೇಖರ್‌್್, ಜಿ.ಸಿ. ಆನಂದ್‌್, ಬೇಲೂರು ಸೋಮಶೇಖರ್‌್, ಆಯುಕ್ತ ಶಶಿಕುಮಾರ್, ಕಾರ್ಯಪಾಲಕ ಎಂಜಿನಿಯರ್‌ ಚನ್ನಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.