ಗುರುವಾರ , ಏಪ್ರಿಲ್ 22, 2021
30 °C

ರಷ್ಯಾದಲ್ಲಿ ಪ್ರವಾಹ: 150 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರಿಮ್‌ಸ್ಕ್, ರಷ್ಯಾ (ಎಎಫ್‌ಪಿ): ಇಲ್ಲಿನ ಕ್ರಾಸ್‌ನೊಡಾರ್ ಪ್ರಾಂತ್ಯದ ದಕ್ಷಿಣ ಭಾಗದಲ್ಲಿ ಶನಿವಾರ ಕಂಡುಬಂದ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ.



ಈ ಪ್ರದೇಶದಲ್ಲಿ ಇದುವರೆಗೆ ಕಂಡುಬಂದ ಅತ್ಯಂತ ದೊಡ್ಡ ನೈಸರ್ಗಿಕ ವಿಕೋಪ ಇದಾಗಿದ್ದು ಪ್ರವಾಹದಿಂದಾಗಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡ ಪರಿಣಾಮವಾಗಿ  29,000ದಷ್ಟು ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.



ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸ್ವತಃ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಭಾರೀ ರಭಸದಿಂದ ರಾತ್ರಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಮೀಪದ ಜಲಾಶಯದ ಕ್ರಸ್ಟ್ ಗೇಟ್‌ಗಳನ್ನು  ತೆರೆದದ್ದೇ ಪ್ರವಾಹಕ್ಕೆ ಕಾರಣವಾಗಿರಬಹುದು ಎಂದೂ ಅವರು ಶಂಕಿಸಿದ್ದಾರೆ.



 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.