ರಸಗೊಬ್ಬರ ಬೆಲೆ ಏರಿಕೆ:ರೈತರಿಂದ ಪ್ರತಿಭಟನೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ರಸಗೊಬ್ಬರ ಬೆಲೆ ಏರಿಕೆ:ರೈತರಿಂದ ಪ್ರತಿಭಟನೆ

Published:
Updated:

ಶ್ರೀರಂಗಪಟ್ಟಣ: ಇಫ್ಕೊ ಸೇರಿದಂತೆ ವಿವಿಧ ಹೆಸರಿನ ರಸಗೊಬ್ಬರ ಬೆಲೆ ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.ಬೆಂಗಳೂರು- ಮೈಸೂರು ಹೆದ್ದಾರಿ ವೃತ್ತದಲ್ಲಿ ಸುಮಾರು ಅರ್ಧತಾಸು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ರಸಗೊ ಬ್ಬರ ಬೆಲೆ ಏರಿಸುವ ಮೂಲಕ ಸರ್ಕಾ ರಗಳು ಸಂಕಷ್ಟದಲ್ಲಿರುವ ರೈತರನ್ನು ಮತ್ತಷ್ಟು ದುಸ್ಥಿತಿಗೆ ದೂಡುತ್ತಿವೆ. ತೆರಿಗೆ ವಂಚಕರು, ರಸಗೊಬ್ಬರ ಉತ್ಪನ್ನ ಕಂಪೆನಿಗಳಿಗೆ ಅನುಕೂಲ ಮಾಡಿಕೊಡ ಲಾಗುತ್ತಿದೆ. ಇಫ್ಕೊ, ಯೂರಿಯಾ ಇತರ ರಸಗೊಬ್ಬರಗಳ ಬೆಲೆ ತೀವ್ರ ಹೆಚ್ಚಳವಾಗಿದ್ದು, ರೂ.415 ಇದ್ದ ಇಫ್ಕೊ ಬೆಲೆ ರೂ.730ಕ್ಕೆ ಏರಿಕೆಯಾಗಿದೆ. ರಸಗೊಬ್ಬರ ಬೆಲೆಯನ್ನು ಇಳಿಸಬೇಕು ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅಗ್ರಹಿಸಿದರು.ರಸಗೊಬ್ಬರ ಬೆಲೆ ಇಳಿಸುವಂತೆ ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದು ಬೆಲೆ ಇಳಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಕೆಂಪೇಗೌಡ ಎಂ.ಸಿ. ನಾಗರಾಜು, ಬಿ.ಎಸ್.ರಮೇಶ್, ಪಾಂಡು, ಯತೀಶ್, ಕಿರಂಗೂರು ಮಹದೇವು, ನಾಗೇಂದ್ರು, ನೆಲಮನೆ ಕಾಳೇಗೌಡ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಖಂಡನೆ: ರಸಗೊಬ್ಬರ ಬೆಲೆ ಹೆಚ್ಚಳ ಕ್ರಮವನ್ನು ತಾ.ಪಂ. ಅಧ್ಯಕ್ಷ ಟಿ.ಶ್ರೀಧರ್ ಖಂಡಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ರಸಗೊಬ್ಬರ ಬೆಲೆ ಇಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry