ಸೋಮವಾರ, ಮೇ 23, 2022
20 °C

ರಸಗೊಬ್ಬರ ಸಂಗ್ರಹಣೆ ಗೋದಾಮು ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ರೈತರ ಅನುಕೂಲಕ್ಕಾಗಿ ರಾಜ್ಯ ಸಹಕಾರ ಮಾರಾಟ ಮಂಡಳಿಯಿಂದ ರೂ. 35ಲಕ್ಷ ವೆಚ್ಚದಲ್ಲಿ ರಸಗೊಬ್ಬರ ಸಂಗ್ರಹಣೆ ಗೋದಾಮು ನಿರ್ಮಾಣ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದರು.ಶನಿವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಿರುವ ರಸಗೊಬ್ಬರ ಸಂಗ್ರಹಣೆ ಗೋದಾಮು ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.800 ಮೆಟ್ರಿಕ್ ಟನ್ ಸಾಮರ್ಥ್ಯವಿರುವ ಉಗ್ರಾಣದಲ್ಲಿ 50 ಕೆ.ಜಿ. ತೂಕದ 16ಸಾವಿರ ರಸಗೊಬ್ಬರದ ಚೀಲಗಳನ್ನು ಸಂಗ್ರಹಣೆ ಮಾಡಿ ಜಿಲ್ಲೆ ಎಲ್ಲ ತಾಲ್ಲೂಕುಗಳಿಗೆ ಸರಬರಾಜು ಮಾಡಬಹುದು. ಸಂಗ್ರಹಣೆ ಮಾಡುವುದರಿಂದ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ವಿತರಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.ರಾಜ್ಯ ಸಹಕಾರ ಮಾರಾಟ ಮಂಡಳಿ ಅಧ್ಯಕ್ಷ ಹಾಲಪ್ಪ ಆಚಾರ್ ಮಾತನಾಡಿ, ಕೃಷಿಕರಿಗೆ ಸಕಾಲದಲ್ಲಿ ರಸಗೊಬ್ಬರ ಪೂರೈಕೆ ಮಾಡುವ ಉದ್ದೇಶದಿಂದ ಸರ್ಕಾರ ಸಹಕಾರ ಮಂಡಳಿಗೆ ರೂ. 300ಕೋಟಿ ನೀಡಿದ್ದು, ಈ ಅನುದಾನದ ಮೂಲಕ ಗೋದಾಮುಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.ರಾಜ್ಯ ಸಹಕಾರ ಮಾರಾಟ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಮೂರ್ತಿ ಮಾತನಾಡಿ, 10 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸಂಗ್ರಹಣೆ ಗೋದಾಮು ನಿರ್ಮಾಣ ಮಾಡಬೇಕು ಎನ್ನುವ ಸರ್ಕಾರದ ನಿರ್ದೇಶನವಿದ್ದು, ಅದೇ ರೀತಿ ಎಲ್ಲ ಜಿಲ್ಲೆಗಳಲ್ಲಿ ಸಹಕಾರ ಮಾರಾಟ ಮಂಡಳಿಯಿಂದ ಗೋದಾಮು ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿನೀಡಿದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ, ಶಾಸಕರಾದ ಎಸ್.ಕೆ. ಬಸವರಾಜನ್, ಎಂ. ಚಂದ್ರಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎನ್.ಆರ್. ಲಕ್ಷ್ಮೀಕಾಂತ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಮಂಡಳಿ ನಿರ್ದೇಶಕ ಎಚ್.ಎಂ. ಮಂಜುನಾಥಪ್ಪ ಮತ್ತು ಎಪಿಎಂಸಿ ಸದಸ್ಯರು ಮತ್ತಿತರರು ಹಾಜರ್ದ್ದಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.