ರಸೆಲ್ ಮಾರುಕಟ್ಟೆಯಲ್ಲಿ ಅಗ್ನಿ ತಾಂಡವ

7

ರಸೆಲ್ ಮಾರುಕಟ್ಟೆಯಲ್ಲಿ ಅಗ್ನಿ ತಾಂಡವ

Published:
Updated:

ಬೆಂಗಳೂರು: ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಶಿವಾಜಿನಗರದ ರಸೆಲ್ ಮಾರುಕಟ್ಟೆ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ಸುಮಾರು 123 ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಬೆಳಗಿನ ಜಾವ 3.15ರ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಅಕ್ಕಪಕ್ಕದ ಅಂಗಡಿಗಳಿಗೆ ವ್ಯಾಪಿಸಿದೆ.ವಿಷಯ ತಿಳಿದ 29 ಅಗ್ನಿನಂದಕ ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಏಳು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. 

ಹಾನಿಗೊಳಗಾಗಿರುವ ಕಟ್ಟಡದ ಅರ್ಧ ಭಾಗ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಸಮಯದಲ್ಲಿ ಬೀಳುವ ಹಂತ ತಲುಪಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry