ರಸ್ತಾಪುರ ಗ್ರಾಪಂ: `ಅಡ್ಡ ಮತದಾನ

7

ರಸ್ತಾಪುರ ಗ್ರಾಪಂ: `ಅಡ್ಡ ಮತದಾನ

Published:
Updated:

 


ಶಹಾಪುರ: ತಾಲ್ಲೂಕಿನ ರಸ್ತಾಪೂರ ಗ್ರಾಮ ಪಂಚಾಯಿತಿ ಎರಡನೆ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆದಿದ್ದು ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತ  ಸದಸ್ಯ ಮಲ್ಲಿಕಾರ್ಜುನ ನಾಯ್ಕೋಡಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ 23. ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಂಖ್ಯೆ 14, ಬಿಜೆಪಿ ಬೆಂಬಲಿತ ಸದಸ್ಯರ ಸಂಖ್ಯೆ 9. ಬುಧವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹಾಗೂ ತಿಪ್ಪಾರಡ್ಡಿ ನಡುವೆ ಸ್ಫರ್ಧೆ ಏರ್ಪಟ್ಟಾಗ ಕಾಂಗ್ರೆಸ್ ಬೆಂಬಲಿತ ಐವರು ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಅಡ್ಡ ಮತದಾನ ಮಾಡುವ ಮೂಲಕ ಅಚ್ಚರಿ ಫಲಿತಾಂಶ ನೀಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಂಖ್ಯೆ ಬಹುಮತವಿದ್ದರೂ ಅಧ್ಯಕ್ಷ ಹುದ್ದೆ ಕಳೆದುಕೊಂಡು  ಮುಖಭಂಗವಾಗಿದೆ ಎಂದು ಯಲ್ಲಯ್ಯ ನಾಯಕ ವನದುರ್ಗ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry