ಗುರುವಾರ , ಮೇ 6, 2021
31 °C

ರಸ್ತೆಗೆ ಅಕ್ರಮ ಖಾತೆ ಆರೋಪ: ಪಂಚಾಯಿತಿ ಆವರಣದಲ್ಲಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ಚೋಳಘಟ್ಟದಿಂದ ಜಂಗಾಲಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಜಾಗವನ್ನು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯು ಗ್ರಾಮಸ್ಥರೊಬ್ಬರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದೆ ಎಂದು ಆರೋಪಿಸಿ ಚೋಳಘಟ್ಟ ಗ್ರಾಮಸ್ಥರು ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು. ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿದರು.ಸಂಪರ್ಕ ರಸ್ತೆಯು ಕಿರಿದಾಗಿದ್ದ ಪರಿಣಾಮವಾಗಿ ಗ್ರಾಮಸ್ಥರೆಲ್ಲರೂ ಸೇರಿ ಗ್ರಾಮಠಾಣೆಯಲ್ಲಿ ರಸ್ತೆ ನಿರ್ಮಾಣ ಮಾಡಿದ್ದೇವೆ.ಆದರೆ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯು ನಮ್ಮ ಹಳ್ಳಿಯ ನಿವಾಸಿ ಆನಂದಕುಮಾರ್ ಎಂಬುವವರಿಗೆ ರಸ್ತೆಯ 30-20 ಗಜದಷ್ಟು ಸ್ಥಳವನ್ನು ಖಾತೆ ಮಾಡಿಕೊಟ್ಟಿದೆ.ಈ ನಿರ್ಧಾರದ ವಿರುದ್ಧ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜಕೀಯ ವೈಷಮ್ಯದ ಕಾರಣಕ್ಕಾಗಿ ಗ್ರಾಮಸ್ಥರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.ಸಾರ್ವಜನಿಕ ಅನುಕೂಲಕ್ಕಾಗಿ ಇರುವ ರಸ್ತೆಯ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲಿಸಬೇಕು. ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯನ್ನು ಕೋರಿದರು.ಗ್ರಾಮ ಪಂಚಾಯಿತಿ ಸದಸ್ಯ ಶೀನಪ್ಪ, ಕೆಂಪಣ್ಣ, ಗೋಪಾಲಗೌಡ, ಹನುಮಪ್ಪ, ವೆಂಕಟೇಶ್ ನೇತೃತ್ವ ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.