ಸೋಮವಾರ, ಏಪ್ರಿಲ್ 19, 2021
25 °C

ರಸ್ತೆ ಅಗೆತ: ಸಂಚಾರಕ್ಕೆ ಅಡಚಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ : ತಾಲ್ಲೂಕಿನ ಭುವನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿಯ ರಸ್ತೆಯಲ್ಲಿ ರಾತ್ರೋ ರಾತ್ರಿ ದೊಡ್ಡ ಗುಂಡಿಗಳನ್ನು ತೆಗೆಯಲಾಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.ಸುತ್ತಮುತ್ತಲಿನ 18 ಗ್ರಾಮಗಳ ರೈತರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸಾರ್ವಜನಿಕರು ಚಿಕ್ಕಬಳ್ಳಾಪುರ, ದೇವನಹಳ್ಳಿ, ಬೆಂಗಳೂರು ನಗರಕ್ಕೆ ಸಂಚರಿಸುವ ರಸ್ತೆ ಇದಾಗಿದ್ದು, ಗುಂಡಿ ತೆಗೆದಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.ರಾತ್ರಿ ವೇಳೆ ಗುಂಡಿ ಅಗೆತ: ರೈಲ್ವೆ ಇಲಾಖೆಯವರು ನೂರು ಮಂದಿ ಪೊಲೀಸರನ್ನು ನಿಯೋಜಿಸಿ, ಎರಡು ಜೆಸಿಬಿ ಯಂತ್ರಗಳಿಂದ ಶನಿವಾರ ರಾತ್ರಿ ರಸ್ತೆ ಅಗೆದಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಭುವನಹಳ್ಳಿ ನಿವಾಸಿ ಶ್ರಿನಿವಾಸ್ ತಿಳಿಸಿದ್ದಾರೆ. ಈ ರಸ್ತೆಯಲ್ಲಿ ಗುಂಡಿ ತೆಗೆದಿರುವುದರಿಂದ ಬಸ್ಸುಗಳು ಸಂಚರಿಸದಂತಾಗಿದೆ. ಮೂರು ಬಿ.ಎಂ.ಟಿ.ಸಿ ಬಸ್ಸುಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ಸುತ್ತಲಿನ ಗ್ರಾಮಸ್ಥರು ಬೇರೆಡೆ ಸಾಗಲು ಎರಡು ಕಿ.ಮೀ.ನಡೆದು ಸಮೀಪದ ಕನ್ನಮಂಗಲ ಪಾಳ್ಯ ಬಸ್ ನಿಲ್ದಾಣಕ್ಕೆ ಬರಬೇಕಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎನ್ನುತ್ತಾರೆ ಶ್ರಿನಿವಾಸ್.ರೈಲ್ವೆ ಲೆವಲ್ ಕ್ರಾಸಿಂಗ್‌ನಲ್ಲಿ ಕಾರ್ಯನಿರ್ವಹಿಸುವ ನೌಕರನನ್ನು ಬೇರೆಡೆಗೆ ವರ್ಗಾಯಿಸುವ ದೃಷ್ಟಿಯಿಂದ ರೈಲೆ ಇಲಾಖೆ ಇಲ್ಲಿ ಗುಂಡಿ ತೆಗೆಸಿ ಈ ರಸ್ತೆಯನ್ನು ಬಂದ್ ಮಾಡಿದೆ ಎಂದು ಸ್ಥಳಿಯರು ಅನುಮಾನ ವ್ಯಕ್ತಪಡಿಸುತ್ತಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.