ರಸ್ತೆ ಅನಧಿಕೃತ ಅಗೆತ: ದಂಡ

ಶುಕ್ರವಾರ, ಮೇ 24, 2019
23 °C

ರಸ್ತೆ ಅನಧಿಕೃತ ಅಗೆತ: ದಂಡ

Published:
Updated:

ಬೆಂಗಳೂರು: ಮಾರತ್‌ಹಳ್ಳಿ ವಾರ್ಡ್ ವ್ಯಾಪ್ತಿಯ ಯಮಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಅನಧಿಕೃತವಾಗಿ ಮೂರು ಕಡೆ ರಸ್ತೆ ಅಗೆದ ರಿಲಯನ್ಸ್ ಕಮ್ಯೂನಿಕೇಷನ್ ಸಂಸ್ಥೆಗೆ ಬಿಬಿಎಂಪಿ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.ಯಮಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಮುನೇಶ್ವರ ದೇವಸ್ಥಾನದ ರಾಜು ಕಾಲೋನಿಯವರೆಗೆ ಸುಮಾರು 300 ಮೀಟರ್ ಅಂತರದಲ್ಲಿ ಮೂರು ಕಡೆ ಅನಧಿಕೃತವಾಗಿ ರಸ್ತೆ ಅಗೆದಿರುವುದು ಪಾಲಿಕೆ ಗಮನಕ್ಕೆ ಬಂದಿದೆ. ಆ ಹಿನ್ನೆಲೆಯಲ್ಲಿ ವಾಹನವನ್ನು ಜಫ್ತಿ ಮಾಡಿದೆ.ರಸ್ತೆಯನ್ನು ಅನಧಿಕೃತವಾಗಿ ಅಗೆದಿರುವ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್‌ನ ರಿಲಯನ್ಸ್ ಕಮ್ಯೂನಿಕೇಷನ್ ಸಂಸ್ಥೆಗೆ ಮಹದೇವಪುರ ವಲಯದ ಜಂಟಿ ಆಯುಕ್ತರು 30 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry