ಶನಿವಾರ, ಜೂನ್ 19, 2021
27 °C

ರಸ್ತೆ ಅಪಘಾತ: ಮಲಯಾಳಂ ಹಾಸ್ಯ ನಟ ಜಗತಿ ಶ್ರೀಕುಮಾರ್‌ಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಜಿಕೊಡ್ (ಕೇರಳ), (ಐಎಎನ್‌ಎಸ್): ಮಲಯಾಳಂ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಜಗತಿ ಶ್ರೀಕುಮಾರ್ (62) ಅವರು  ಶನಿವಾರ ಮುಂಜಾನೆ ಇಲ್ಲಿನ ವಿಶ್ವವಿದ್ಯಾಲಯದ ಆವರಣದಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಶ್ರೀಕುಮಾರ್ ಅವರು ಇಂದು ಮುಂಜಾನೆ 4.30 ವೇಳೆ ತಮ್ಮ ಇನ್ನೋವಾ ಕಾರಿನಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಹೋಗುತ್ತಿರುವಾಗ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆತ ಸ್ಥಳದಿಂದ ತಪ್ಪಿಸಿಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 



`ಶ್ರೀಕುಮಾರ್ ಅವರಿಗೆ ಕುತ್ತಿಗೆ, ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಅವರಿಗೆ ಸದ್ಯ ಕೃತಕ ಉಸಿರಾಟವನ್ನು ಒದಗಿಸಲಾಗಿದೆ. ಅಗತ್ಯವಿದ್ದಲ್ಲಿ  ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುವುದು~ ಎಂದು ಅವರನ್ನು ನೋಡಿಕೊಳ್ಳುತ್ತಿರುವ 10 ಜನ ವ್ಯೆದ್ಯರ ತಂಡದ ಮುಖ್ಯ ವ್ಯೆದ್ಯಾಧಿಕಾರಿ ವೇಣುಗೋಪಾಲ್ ಅವರು ಪತ್ರಕರ್ತರಿಗೆ ತಿಳಿಸಿದ್ದಾರೆ.



ಜಗತಿ ಶ್ರೀಕುಮಾರ್ ಅವರು ಸಾವಿರಕ್ಕೂ ಅಧಿಕ ಮಲಯಾಳಂ ಚಿತ್ರಗಳಲ್ಲಿ ನಟಿಸಿ, ಮನೆ ಮಾತಾಗಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.