ಬುಧವಾರ, ಅಕ್ಟೋಬರ್ 16, 2019
22 °C

ರಸ್ತೆ ಅಪಘಾತ: ಶಾಸಕ ಶ್ರೀನಿವಾಸ ಮಾನೆ ಪಾರು

Published:
Updated:

ಹಾವೇರಿ: ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಮಾನೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾವೇರಿಯಿಂದ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಮಾನೆ ಅವರು ಖಾಸಗಿ ಕಾರ್‌ನಲ್ಲಿ ಹುಬ್ಬಳ್ಳಿಗೆ ತೆರಳಿ ಚಿಕಿತ್ಸೆ ಪಡೆದರು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಂಕಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post Comments (+)