ಸೋಮವಾರ, ಜೂನ್ 21, 2021
30 °C

ರಸ್ತೆ ಅಭಿವೃದ್ಧಿಗೆ ಅನುದಾನ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಹೆದ್ದಾರಿಗಳು, ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ರೂ 4,380 ಕೋಟಿ ಅನುದಾನ ಒದಗಿಸಲಾಗಿದೆ. ರೂ 2,797 ಕೋಟಿ ವೆಚ್ಚದಲ್ಲಿ ಒಟ್ಟು 4,132 ಕಿ.ಮೀ. ರಸ್ತೆಯನ್ನು ಉತ್ತಮಪಡಿಸುವ ಮತ್ತು 3,122 ಕಿ.ಮೀ ರಸ್ತೆಯನ್ನು ನವೀಕರಿಸುವ `ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ~ಯನ್ನು ಸರ್ಕಾರ ರೂಪಿಸಿದೆ.ಇಷ್ಟು ದೊಡ್ಡ ಮೊತ್ತದ ಅನುದಾನವನ್ನು ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿಗೆ ನೀಡಿರುವುದು ಇದೇ ಮೊದಲು. ಈ ಅನುದಾನಕ್ಕೆ ಪೂರಕವಾಗಿ ಖಾಸಗಿ ಸಹಭಾಗಿತ್ವದ ಮೂಲಕವೂ ಬಂಡವಾಳ ಪೂರೈಸುವ ಯೋಜನೆ ಹಾಕಿಕೊಳ್ಳಲಾಗಿದೆ.ಒಟ್ಟು ಅನುದಾನದಲ್ಲಿ ಶೇಕಡ 32ರಷ್ಟನ್ನು (ರೂ 1,215 ಕೋಟಿ) ರಸ್ತೆಗಳ ನಿರ್ವಹಣೆಗೆ ಮೀಸಲಿಡಲಾಗಿದೆ. ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಜಿಲ್ಲಾ ಕೇಂದ್ರಗಳು ಹಾಗೂ ತಾಲ್ಲೂಕು ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಯೋಚನೆ ಸರ್ಕಾರದ್ದು.ಉಳಿದಂತೆ...:

-2011-12ನೇ ಸಾಲಿನಲ್ಲಿ ರೂ 2,153 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಅನುಷ್ಠಾನ ಕಾರ್ಯ 2012-13ನೇ ಸಾಲಿನಲ್ಲಿ ಆರಂಭವಾಗಲಿದೆ.-ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮೂಲಕ ರೂ 75 ಕೋಟಿ ಪ್ಯಾಕೇಜ್.-ರಾಜ್ಯ ರಸ್ತೆ ಅಭಿವೃದ್ಧಿ ನಿಗಮವು ಒಟ್ಟು ರೂ 1,816 ಕೋಟಿ ವೆಚ್ಚದ 630 ಕಿ.ಮೀ. ರಸ್ತೆ ಸುಧಾರಣಾ ಕಾರ್ಯ ಆರಂಭಿಸಿದೆ.-1,191 ಕಿ.ಮೀ. ರಾಜ್ಯ ಹೆದ್ದಾರಿಯ ನಿರ್ವಹಣೆ ಹಾಗೂ ತೆರಿಗೆ ಸಂಗ್ರಹ ಪ್ರಕ್ರಿಯೆಯನ್ನು 2012-13ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.