ಬುಧವಾರ, ಏಪ್ರಿಲ್ 14, 2021
29 °C

ರಸ್ತೆ ಅಭಿವೃದ್ಧಿಗೆ ರೂ. 135 ಕೋಟಿ ಅನುದಾನ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು: `ತಾವು ಶಾಸಕರಾದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ತಾಲ್ಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗೆ 135 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ~ ಎಂದು ಶಾಸಕ ವೈ.ಎನ್.ರುದ್ರೇಶ್‌ಗೌಡ ಹೇಳಿದರು.15.87 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾ ಗುತ್ತಿರುವ ಬೇಲೂರು- ಚಿಕ್ಕಮ ಗಳೂರು-ಹಾಸನ ಮತ್ತು ಬೇಲೂರು- ಮದಘಟ್ಟ- ವಾಟೇಹೊಳೆ- ಕೆರಲೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಪಟ್ಟಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಬಿಕ್ಕೋಡು-ಅರೇಹಳ್ಳಿ ರಸ್ತೆ, ಬೇಲೂರು-ಚಿಕ್ಕಮಗಳೂರು,ಗೆಂಡೇಹಳ್ಳಿ ರಸ್ತೆ, ಚೀಕನಹಳ್ಳಿ ರಸ್ತೆ ಡಾಂಬರೀಕರಣ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತಮ್ಮ ಅವಧಿಯಲ್ಲಿ ಮಾಡಲಾಗಿದೆ. ಚೀಕನಹಳ್ಳಿ-ಅರೇಹಳ್ಳಿ- ಸಕಲೇಶಪುರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದರು.ಬಸ್ ಡಿಪೋ ನಿರ್ಮಾಣ ಮಾಡಲು 2.5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಒಂಬತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಪಾಲಿಟೆಕ್ನಿಕ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಬೇಲೂರು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸರ್ಕಾರ 3.6 ಕೋಟಿ ರೂ. ಬಿಡುಗಡೆ ಮಾಡಿದ್ದು, ಈ ಕಾಮಗಾರಿ ಶಂಕುಸ್ಥಾಪನೆ ಮಾಡಲು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಬಾರದೇ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಇತ್ತ ಕಾಮಗಾರಿಯೂ ಆರಂಭ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪುರಸಭಾಧ್ಯಕ್ಷ ತೊ.ಚ.ಅನಂತಸುಬ್ಬರಾಯ ಮಾತನಾಡಿದರು. ಜಿಲ್ಲಾ ಪಂಚಾ ಯಿತಿ ಸದಸ್ಯರಾದ ಜಿ.ಟಿ.ಇಂದಿರಾ, ಎಂ.ವಿ.ಹೇಮಾವತಿ, ಬಿ.ಡಿ.ಚಂದ್ರೇ ಗೌಡ, ಪುರಸಭಾ ಸದಸ್ಯರಾದ ಬಿ.ಎಲ್.ಧರ್ಮೇಗೌಡ, ಜಮೀಲಾ ಭಾನು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.