ಯಳಂದೂರು: `ಪಟ್ಟಣದಿಂದ ವೈ.ಕೆ. ಮೋಳೆ ಗ್ರಾಮದ ಮಾರ್ಗವಾಗಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರೂ. 3.5 ಕೋಟಿ ಬಿಡುಗಡೆಯಗಿದ್ದು, ಇನ್ನೆರಡು ತಿಂಗಳೊಳಗೆ ಕಾಮಗಾರಿ ಆರಂಭವಾಗುವುದಾಗಿ~ ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.

ತಾಲ್ಲೂಕಿನ ವೈ.ಕೆ. ಮೋಳೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ 7.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಹೆಚ್ಚುವರಿ ಶಾಲಾ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಗ್ರಾಮದ ಮಾರ್ಗವಾಗಿ ಹೊಂಗನೂರಿನ ತನಕ ಹಾದು ಹೋಗಿರುವ ರಸ್ತೆಯೂ ತೀರಾ ಹದಗೆಟ್ಟದೆ. ಈ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಹೆದ್ದಾರಿಗೂ ಇದು ಸೇರ್ಪಡೆಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಈ ಭಾಗದಲ್ಲಿ ಕುಡಿಯುವ ನೀರಿಗೆ 11 ಕೋಟಿ ರೂ. ಮಂಜೂರಾಗಿದೆ. ಗ್ರಾಮದ ಕುಡಿಯುವ ನೀರಿನ ಸಮಸ್ಯೆಗಳಿಗೆ ಶೀಘ್ರದಲ್ಲೇ ಇತಿಶ್ರೀ ಹಾಡುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕೇತಮ್ಮ, ರೂ. 32 ಲಕ್ಷ ಅನುದಾನದಲ್ಲಿ ಗ್ರಾಮದ ಸಿಸಿ ರಸ್ತೆ, ಚರಂಡಿ ಹಾಗೂ ಗ್ರಾಮದ ಅಭಿವೃದ್ಧಿಗೆ ರೂ. 18 ಲಕ್ಷ ಮೀಸಲು ಇಟ್ಟಿರುವುದಾಗಿ ತಿಳಿಸಿದರು. ಗ್ರಾಮ ಶುಚಿಯಾಗಿಟ್ಟುಕೊಂಡು ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ಅರಿವು ಮೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿ.ಪಂ. ಉಪಾಧ್ಯಕ್ಷ ಸಿದ್ಧರಾಜು ಆರೋಗ್ಯ ಹಾಗೂ ಶಿಕ್ಷಣ ಸಮಿತಿ ಅಧ್ಯಕ್ಷ ಕೊಪ್ಪಾಳಿ ಮಹದೇವನಾಯಕ, ತಾ.ಪಂ. ಅಧ್ಯಕ್ಷೆ ಗೌರಮ್ಮಮಹದೇವಸ್ವಾಮಿ, ಉಪಾದ್ಯಕ್ಷೆ ವಿಜಯಲಕ್ಷ್ಮಿನಂಜುಂಡ, ಸದಸ್ಯ ಕೆ.ಪಿ. ಶಿವಣ್ಣ, ಗ್ರಾ.ಪಂ. ಅಧ್ಯಕ್ಷ ಸಿದ್ಧನಾಯಕ ಸದಸ್ಯರಾದ ನಾಗಮ್ಮವೆಂಕಟರಾಮು, ನಾಗೇಂದ್ರಸ್ವಾಮಿ, ಇಒ ಚಿಕ್ಕಲಿಂಗಯ್ಯ, ಬಿಇಒ ಪಿ. ಮಂಜುನಾಥ್, ಬಿಆರ್ಸಿ ರಾಜಪ್ಪ, ಪಿಡಿಒ ಗಂಗಾಧರ್, ವೀರಭದ್ರಸ್ವಾಮಿ, ಶಿಕ್ಷಕ ಸಂಘದ ಅಧ್ಯಕ್ಷ ರಾಜು, ಕಾರ್ಯದರ್ಶಿ ಸತೀಶ್, ಎಸ್ಡಿಎಂಸಿ ಅಧ್ಯಕ್ಷ ಆರ್. ಸಿದ್ಧರಾಜು, ಶಿವರಾಮು, ಕೆಂಚಹಾರುವಶೆಟ್ಟಿ, ಮಹಾದೇವಶೆಟ್ಟಿ, ನಾಗರಾಜು, ನಿಂಗಮ್ಮ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.